Pro Pakistan Slogan: ಪಾಕ್‌ ಪರ ಘೋಷಣೆ ಪ್ರಕರಣ; ಮೂವರು ಆರೋಪಿಗಳ ಬಂಧನ

Share the Article

Pro Pakista Slogan: ಪಾಕ್‌ ಪರ ಘೋಷಣೆ ಪ್ರಕರಣ ಕುರಿತಂತೆ ವಿಧಾನಸೌಧ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಮುನಾವರ್‌, ಇಲ್ತಾಜ್‌ ಮತ್ತು ಮೊಹಮ್ಮದ್‌ ಶಫಿ ನಾಶಿಪುಡಿ ಬಂಧಿತರ ಆರೋಪಿಗಳು.

ಬಂಧಿತರಲ್ಲಿ ಓರ್ವ ಪಾಕಿಸ್ತಾನ ಅಂತ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದರು. ಈ ಪ್ರಕರಣ ರಾಜಕೀಯ ವಲಯದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿತ್ತು. ಈ ಘಟನೆ ಕುರಿತು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮೂವರು ಆರೋಪಿಗಳ ಬಂಧನವನ್ನು ಖಚಿತ ಪಡಿಸಿದ್ದಾರೆ. ಎಫ್‌ಎಸ್‌ಎಲ್‌ ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಯುತಿತದ್ದು, ನಂತರ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿರುವುದಾಗಿ ವರದಿಯಾಗಿದೆ.

Leave A Reply