Rape News: 6 ನೇ ತರಗತಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲ ಸೆರೆ

ಚನ್ನಪಟ್ಟಣ (ರಾಮನಗರ): ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲ ಸತೀ ಶ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: Mangalore: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಕುಕ್ಕರ್ ಬಾಂಬ್ ಸಾಮ್ಯತೆ, ಮಂಗಳೂರಿನಲ್ಲಿ ಪರಿಶೀಲನೆ

ಹೊಟ್ಟೆನೋವು ಎಂದು ಹೇಳಿಕೊಂಡು ಬಂದ 6ನೇ ತರಗತಿ ಬಾಲಕಿ ಜತೆ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ವಿಷಯವನ್ನು ತನ್ನ ಪೋಷಕರಿಗೆ ಬಾಲಕಿ ದೂರವಾಣಿ ಮೂಲಕ ತಿಳಿಸಿದಾಗ, ಪೋಷಕರು ಠಾಣೆಗೆ ದೂರು ನೀಡಿದರು.

ಪ್ರಕರಣ ದಾಖಲಾಗುತ್ತಿದ್ದಂತೆ ಕೆಂಗೇರಿಯಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಸಹ ಪೋಸ್ಕೊ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

Leave A Reply

Your email address will not be published.