Kerala: ಕೇರಳದ ಕೊಟ್ಟಾಯಂನಲ್ಲಿ ದಂಪತಿ, 3 ಮಕ್ಕಳ ಶವ ಪತ್ತೆ; ಪತ್ನಿ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಗಂಡ

Crime News: ಕೊಟ್ಟಾಯಂ (ಕೇರಳ): ಕೇರಳದ ಕೊಟ್ಟಾಯಂ ಜಿಲ್ಲೆಯ ಪುವರಣಿ ಬಳಿಯ ಪಾಲಾದಲ್ಲಿ ದಂಪತಿಗಳು ಮತ್ತು ಅವರ ಮೂವರು ಮಕ್ಕಳು ತಮ್ಮ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಕಲಕುನ್ನಂ ನಂಜಂದುಪಾರ ಮೂಲದ ಜೈಸನ್ ಥಾಮಸ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಪತ್ನಿ ಮೆರೀನಾ ಮತ್ತು ಮಕ್ಕಳನ್ನು ಕೊಂದು ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆತನ ಶವ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೆರೀನಾ ತೀವ್ರ ಗಾಯಗಳೊಂದಿಗೆ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಕ್ಕಳಾದ ಜೆರಾಲ್ಡ್ (4), ಜೆರೀನಾ (2) ಮತ್ತು ಏಳು ತಿಂಗಳ ಮಗುವನ್ನು ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಜೈಸನ್ ರಬ್ಬರ್ ಫ್ಯಾಕ್ಟರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಘಟನೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ

ಜೈಸನ್ ಅವರು ಆರ್ಥಿಕ ಸಂಕಷ್ಟದಲ್ಲಿದ್ದು, ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು  ಶಂಕೆ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.