Mandya: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತನಿಂದಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ – 2022ರ ಕೇಸ್ ಕೆದಕಿದ ಸರ್ಕಾರ!!

Mandya : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಎರಡು ವರ್ಷಗಳ ಹಿಂದೆ ಮಂಡ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ತನ್ನ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ (BJP) ವಿರುದ್ಧ ದ್ವೇಷದ ರಾಜಕೀಯಕ್ಕೆ ಕಾಂಗ್ರೆಸ್ (Congress) ಮುಂದಾಯಿತಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.

ಇದನ್ನೂ ಓದಿ: S. Somnath: ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರಿಗೆ ಕ್ಯಾನ್ಸರ್ ಧೃಢ : ಕೀಮೋ ಥೆರಪಿಗೆ ಒಳಗಾದ ವಿಜ್ಞಾನಿ

ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆ ಗೆಲುವಾಗುತ್ತಿದ್ದಂತೆ ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಮೊಳಗಿಸಿದ್ದ ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು. ಪ್ರಕರಣ ದಾಖಲಾದ ಬಳಿಕ ಪಾಕ್ ಪರ ಘೋಷಣೆ ಕೂಗಿದ್ದು ದೃಢವಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮೂವರು ಅರೆಸ್ಟ್ ಆಗುತ್ತಿದ್ದಂತೆ ಮಂಡ್ಯದಲ್ಲೂ ಓರ್ವನನ್ನು ಅರೆಸ್ಟ್ ಮಾಡಲಾಗಿದೆ.

ಏನಿದು ಪ್ರಕರಣ?

2022ರಲ್ಲಿ ಮಂಡ್ಯದ ಸಂಜಯ್ ಸರ್ಕಲ್ನಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಅಂದು ಪಾಕ್ ವಿದೇಶಾಂಗ ಸಚಿವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಕನ್ಫೂಜ್ ಆಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಇದನ್ನು ಕೇಳಿಸಿಕೊಂಡ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದ.

ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಗೆ ಮುಜುಗರ ಆಗುತ್ತಿದ್ದಂತೆ 2022ರಲ್ಲಿ ಮಂಡ್ಯದಲ್ಲಿ (Mandya) ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಪಾಕ್‌ ಪರ ಘೋಷಣೆ ಕೂಗಿದ ವಿಚಾರವನ್ನೇ ಮುಂದಿಟ್ಟುಕೊಂಡು ಈಗ ಕಾಂಗ್ರೆಸ್‌ ಪ್ರಕರಣ ದಾಖಲಿಸಿದೆ.

Leave A Reply

Your email address will not be published.