Political News: ಚುನಾವಣಾ ಬಾಂಡ್ಗಳ ಮಾಹಿತಿ ನೀಡಲು ಸುಪ್ರೀಂ ಕೋರ್ಟ್ ಗೆ ಕಾಲಾವಕಾಶ ಕೋರಿದ ಆರ್‌ಬಿಐ
ಚುನಾವಣಾ ಬಾಂಡ್‌ಗಳ ಕುರಿತು ಚುನಾವಣಾ ಆಯೋಗಕ್ಕೆ ವಿವರಗಳನ್ನು ಸಲ್ಲಿಸುವ ಕಾಲಾವಕಾಶವನ್ನು ಜೂನ್ 30ರ ವರೆಗೆ ವಿಸ್ತರಿಸುವಂತೆ ಆರ್‌ಬಿಐ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.
ಇದನ್ನೂ ಓದಿ: SBI ಬ್ಯಾಂಕ್ ನಲ್ಲಿ ಖಾತೆ ಹೊಂದಿದವರಿಗೆ ಮಹತ್ವದ ಸುದ್ದಿ- ಇಲ್ಲಿದೆ ನೋಡಿ ಹಣ ಡಬಲ್ ಮಾಡೋ ಟ್ರಿಕ್ಸ್
ಚುನಾವಣಾ ಬಾಂಡ್ ಯೋಜನೆಯನ್ನು ಅಸಿಂಧುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 6ರೊಳಗೆ ಭಾರತ ಚುನಾವಣಾ ಆಯೋಗಕ್ಕೆ ಸಂಪೂರ್ಣ ಮಾಹಿತಿ ಒದಗಿಸುವಂತೆ ಆರ್‌ಬಿಐಗೆ ನಿರ್ದೇಶಿಸಿತ್ತು.
ಪ್ರಜೆಗಳ ಮಾಹಿತಿ ಪಡೆಯುವ ಹಕ್ಕನ್ನು ಉಲ್ಲಂಘಿಸಿದೆ ಎಂಬ ಕಾರಣಕ್ಕೆ ವಿವಾದಾತ್ಮಕ ಚುನಾವಣಾ ಬಾಂಡ್ ಯೋಜನೆಯನ್ನು ಸರ್ವೋನ್ನತ ನ್ಯಾಯಾಲಯ ಕೊನೆಗೊಳಿಸಿತ್ತು. ಈ ಯೋಜನೆಯು ಅಸಾಂವಿಧಾನಿಕ ಹಾಗೂ ಏಕಪಕ್ಷೀಯವಾದುದು ಎಂದು ಹೇಳಿದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಇದು ರಾಜಕೀಯ ಪಕ್ಷಗಳು ಮತ್ತು ದಾನಿಗಳ ನಡುವೆ ಕೊಡು-ಕೊಳ್ಳುವಿಕೆಯಂತಹ ಕೆಟ್ಟ ವ್ಯವಸ್ಥೆಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು.
ಈ ಚುನಾವಣ ಬಾಂಡ್‌ಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್ ಬಿ ಐ ಗೆ ಕೋರ್ಟ್ ಆದೇಶಿಸಿತ್ತು. ಹಾಗೂ ಆರ್‌ಬಿಐ ಸಲ್ಲಿಸುವ ಮಾಹಿತಿಯನ್ನು ಮಾರ್ಚ್ 13ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.