Board Exam Latest Update: 5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ಕಡ್ಡಾಯ – ಹೈಕೋರ್ಟ್ ಪೀಠ ಆದೇಶ !

Board Exams: ರಾಜ್ಯದಲ್ಲಿ ಎಂದು ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠವು ಎಂದು ಗುರುವಾರ ಅನುಮತಿ ನೀಡಿದೆ.

ನಿನ್ನೆ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಏಕ ಸದಸ್ಯ ರದ್ದುಗೊಳಿಸಿತ್ತು. ಈ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ತಕ್ಷಣ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇದರ ತ್ವರಿತ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ಸಾಂಗವಾಗಿ ನಡೆಯಲಿವೆ.

9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟದಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದರು. ಅದರಂತೆ ವಾರ್ಷಿಕ 23-24ನೇ ಸಾಲಿನಿಂದ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 5,8,9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘವು ಹೈಕೋರ್ಟ್ ನ ಮೆಟ್ಟಿಲೇರಿತ್ತು. ಆಗ ಹೈಕೋರ್ಟ್ ಏಕಸದಸ್ಯ ಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಆದರೆ ರಾಜ್ಯ ಸರ್ಕಾರ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.

ಇದೀಗ ಸರ್ಕಾರದ ಕೈ ಮೇಲಾಗುತ್ತದೆ. ಕರ್ನಾಟಕದ ಚಿಣ್ಣರು ಇನ್ನೂ ಮುಂದೆ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಬರೆಯಬೇಕಾಗಿದೆ. ಸೋಮವಾರದಿಂದಲೇ ಬೋರ್ಡ್ ಪರೀಕ್ಷೆಗಳು ಶುರುವಾಗಲಿದೆ.

Leave A Reply

Your email address will not be published.