

Physical Abuse: ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಕುರಿತು ವರದಿಯಾಗಿದೆ. ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದು, ಅಲ್ಲಿಗೆ ಬಂದ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ.
ಇದನ್ನೂ ಓದಿ: 62 Hindus in Pakistan:ಮಹಾಶಿವರಾತ್ರಿ ಆಚರಣೆಗೆ ಪಾಕಿಸ್ತಾನಕ್ಕೆ ತೆರಳಿದ 62 ಭಾರತೀಯರು; ಕಾರಣವೇನು
ಸಿದ್ದಗಂಗಾ ಮಠದ ಜಾತ್ರೆಗೆ ಬಾಲಕಿ ತನ್ನ ಸ್ನೇಹಿತನ ಜೊತೆ ಬಂದಿದ್ದು, ಈ ವೇಳೆ ಮೂವರು ಕಿರಾತಕರು ಮೊಬೈಲ್‌ನಲ್ಲಿ ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ನಂತರ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಬಾಲಕಿ ಇದರಿಂದ ಭಯಗೊಂಡಿದ್ದು, ಬೈಕ್‌ನಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾರೆ. ನಂತರ ಮಠದ ಪಕ್ಕದಲ್ಲಿರುವ ಬಂಡೆಪಾಳ್ಯದ ರೂಂ ನಲ್ಲಿ ಅತ್ಯಾಚಾರ ಮಾಡಿದ್ದಾರೆ ಎಂದು ವರದಿಯಾಗಿದೆ.
ಅತ್ಯಾಚಾರ ಮಾಡಿ ನಂತರ ಬಾಲಕಿಯನ್ನು ಮಠದ ಹತ್ತಿರ ಕರೆತಂದು ಬಿಟ್ಟು ಪರಾರಿಯಾಗಿದ್ದಾರೆ. ಬಾಲಕಿಯ ಸ್ನೇಹಿತ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಈ ಕುರಿತು ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅತ್ಯಾಚಾರ ಕೇಸ್ ದಾಖಲಾಗುತ್ತಿದ್ದಂತೆ ಪೊಲೀಸರು ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ, ಪ್ರತಾಪ್ ಎಂಬ ಆರೋಪಿಗಳ ಬಂಧನ ಮಾಡಿದ್ದಾರೆ.
ಮೂವರನ್ನು ಬಂಧಿಸಿರುವ ಕುರಿತು ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.













