Shivamogga: ರೈಲಿಗೆ ತಲೆಕೊಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಸೈಡ್‌

Share the Article

Shivamogga: ರೈಲಿಗೆ ತಲೆಕೊಟ್ಟು ಸೆಕೆಂಡ್‌ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಬಳಿ ನಡೆದಿದೆ. ಈ ಘಟನೆ ಇಂದು ನಡೆದಿರುವ ಕುರಿತು ವರದಿಯಾಗಿದೆ.

ಇದನ್ನೂ ಓದಿ: Bengaluru: ಕರ್ತವ್ಯ ಮುಗಿಸಿ ಮನೆಗೆ ಹೋಗುವ ದಾರಿಯಲ್ಲಿ ಕೇಳಿತು ಆಕ್ರಂದನ; ಸಂಪಿಗೆ ಬಿದ್ದ ಮಗುವನ್ನು ರಕ್ಷಣೆ ಮಾಡಿದ ಎಸ್‌ಐ

ಭೂಮಿಕಾ (18) ಆತ್ಮಹತ್ಯೆ ಮಾಡಿಕೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಘಟನೆಗೆ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ. ಇಂದು ದ್ವಿತೀಯ ಪಿಯುಸಿ ಭೌತಶಾಸ್ತ್ರ ಪರೀಕ್ಷೆ ಇದ್ದು, ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಯ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪರೀಕ್ಷೆಯ ಭಯವೇ ಈ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ.

Leave A Reply