Home News Sudha Murthy: ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ; ಮೋದಿ ಹೇಳಿದ್ದೇನು?

Sudha Murthy: ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ; ಮೋದಿ ಹೇಳಿದ್ದೇನು?

Sudha Murthy

Hindu neighbor gifts plot of land

Hindu neighbour gifts land to Muslim journalist

Sudha Murthy: ಮಹಿಳಾ ದಿನಾಚರಣೆಯಂದು ಕೇಂದ್ರ ಸರಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ಇದನ್ನೂ ಓದಿ: Kedarnath: ಮೇ 10ಕ್ಕೆ ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಕೇದಾರನಾಥ ದೇವಾಲಯ

ಮೋದಿ ಅವರು ತಮ್ಮ ಪೋಸ್ಟಿನಲ್ಲಿ ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ಖುಷಿಯ ವಿಚಾರ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಎಂದು ಬರೆದಿದ್ದಾರೆ.

ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಿದೆ. ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಕೆ ಮಾಡಿದ್ದಾರೆ.