PM Ujwala Yojana: ಮಹಿಳಾ ದಿನಾಚರಣೆ ಸಂದರ್ಭವೇ 10 ಕೋಟಿ ಮಹಿಳೆಯರಿಗೆ ಸರ್ಕಾರದಿಂದ ಬಹು ದೊಡ್ಡ ಉಡುಗೊರೆ; ಉಜ್ವಲ ಯೋಜನೆಗೆ ಸಂಬಂಧಿಸಿದಂತೆ ದೊಡ್ಡ ಘೋಷಣೆ
PM Ujwala Yojana: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ನೀಡುವ ಸಬ್ಸಿಡಿ ಅವಧಿಯನ್ನು ಕೇಂದ್ರ ಸರ್ಕಾರ ಒಂದು ವರ್ಷ ವಿಸ್ತರಿಸಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಉಜ್ವಲ ಯೋಜನೆಯಡಿ ನೀಡಲಾಗುತ್ತಿರುವ 300 ರೂ.ಗಳ ಸಹಾಯಧನದ ಕಾಲಮಿತಿಯನ್ನು 2025ರ ಮಾರ್ಚ್ 31ರವರೆಗೆ ಮುಂದುವರಿಸಲು ಅನುಮೋದನೆ ನೀಡಲಾಗಿದೆ ಎಂದರು.
ಇದನ್ನೂ ಓದಿ: ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯಿಂದ ಅಶ್ಲೀಲ ವಿಡಿಯೋ ನೆಟ್ಟಿಗೆ ಅಪ್ಲೋಡ್, ಪತಿಯಿಂದ ದೂರು ದಾಖಲು !
ಇಂದು ನಡೆದ ಸಂಪುಟ ಸಭೆಯಲ್ಲಿ ಆರು ನಿರ್ಧಾರಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 300 ರೂ ಸಬ್ಸಿಡಿ ನೀಡಲು ಇಂದು ಕ್ಯಾಬಿನೆಟ್ ನಿರ್ಧರಿಸಿದೆ, ಅದರ ಅವಧಿಯನ್ನು ಮಾರ್ಚ್ 31, 2024 ರವರೆಗೆ 1 ವರ್ಷಕ್ಕೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದರು. ಈಗ 10 ಕೋಟಿಗೂ ಹೆಚ್ಚು ಮಹಿಳೆಯರು ಒಂದು ವರ್ಷದಲ್ಲಿ 12 ಸಿಲಿಂಡರ್‌ಗಳ ಮಿತಿಯವರೆಗೆ ಪ್ರತಿ ಸಿಲಿಂಡರ್‌ಗೆ 300 ರೂ.ಗಳ ಪ್ರಯೋಜನವನ್ನು ಪಡೆಯುತ್ತಾರೆ.