Dakshina Kannada: ಮಲಗಿದ್ದಲೇ ಹೃದಯಾಘಾತದಿಂದ ಸಾವಿಗೀಡಾದ ಯುವಕ

Share the Article

Bantwala: ಯುವಕನೋರ್ವ ಮಲಗಿದ್ದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ಮೆಲ್ಕಾರ್‌ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಮೆಲ್ಕಾರ್‌ ನಿವಾಸಿ ಉದಯ (36) ಮೃತ ಯುವಕ.

ಇದನ್ನೂ ಓದಿ: Parliament Election: ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪನವರಿಗೆ ಬಿಜೆಪಿ ಗಾಳ ಹಾಕಿತ್ತು : ಬಿಜೆಪಿ ವಿರುದ್ಧ ಡಿಕೆಶಿ ಗಂಭೀರ ಆರೋಪ

ಉದಯ ಅವರು ಎಂದಿನಂತೆ ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದಾರೆ. ಬೆಳಗ್ಗೆ ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದುದನ್ನು ಗಮನಿಸಿ, ಆಸ್ಪತ್ರೆಗೆ ಕರೆ ತರಲಾಗಿದೆ. ವೈದ್ಯರು ಪರಿಶೀಲನೆ ಮಾಡಿದಾಗ ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ಹೇಳಿರುವುದಾಗಿ ವರದಿಯಾಗಿದೆ.

ಉದಯ ಅವರು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದರು. ಇವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ. ಆಸ್ಪತ್ರೆಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Leave A Reply