Dakshina Kannada (Vitla): ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ನಲ್ಲಿ ಕಳವು ಪ್ರಕರಣ, ಮೂವರ ಬಂಧನ

Vitla: ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗ ನಗದು ಕಳ್ಳತನ ಪ್ರಕರಣ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್‌ ರಫೀಕ್‌ @ಗೂಡಿನ ಬಳಿ ರಫೀಕ್‌ (35), ಮಂಜೇಶ್ವರ ಬಿಂಗಿನಾನಿ ನಿವಾಸಿ ಇಬ್ರಾಹಿಂ ಕಲಂದರ್‌ (41), ಮಂಜೇಶ್ವರ ಗಾಳಿಯಡ್ಕ ನಿವಾಸಿ ದಯಾನಂದ ಎಸ್‌ (37) ಬಂಧಿತರು.

ಆರೋಪಿಗಳ ಬಂಧನ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.

Leave A Reply

Your email address will not be published.