Karnataka government : ಚುನಾವಣೆಗೆ ನಿಲ್ಲಲು ಸಜ್ಜಾಗುತ್ತಿದ್ದಂತೆ ಡಾ. ಮಂಜುನಾಥ್’ ಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!!
Karnataka government: ಲೋಕಸಭಾ ಚುನಾವಣೆಯಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗುತ್ತಿರುವ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಅವರಿಗೆ ಕರ್ನಾಟಕ ಸರ್ಕಾರ(Karnataka government)ಬಿಗ್ ಶಾಕ್ ಕೊಟ್ಟಿದೆ.
ಸರ್ಕಾರಿ ಸ್ವಾಮ್ಯದ ಜಯದೇವ ಹೃದ್ರೋಗ ಸಂಸ್ಥೆ (Jayadeva Hospital) ನಿರ್ದೇಶಕರಾಗಿ, ಆ ಸಂಸ್ಥೆಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸಿದವರು ಡಾ. ಸಿ ಎನ್ ಮಂಜುನಾಥ್ ಅವರು. ಅವರೀಗ ನಿವೃತ್ತಿ ಬಳಿಕ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಮಾತುಗಳೂ ಕೇಳಿ ಬರುತ್ತಿದ್ದು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಫಿಕ್ಸ್ ಎನ್ನಲಾಗುತ್ತಿದೆ. ಇಂತಹ ಹೊತ್ತಲ್ಲೇ ಜಯದೇವ ಸಂಸ್ಥೆಯಲ್ಲಿ ಸಾವಿರಾರು ಕೋಟಿ ಹಗರಣ ನಡೆದಿದ್ದು, ಹೀಗಾಗಿ ಸಂಸ್ಥೆಯ ಮೇಲೆ ತನಿಖೆ ನಡೆಸಲು ರಾಜ್ಯ ಸರ್ಕಾರ (state government) ಚಿಂತನೆ ನಡೆಸಿದೆ ಎಂಬ ಮಾತೂ ಕೇಳಿ ಬರುತ್ತಿದೆ.
ಹೌದು, ಪಕ್ಷಾತೀತವಾಗಿ ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ ಡಾ.ಮಂಜುನಾಥ್ ಅವರು ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಮುಂದುವರಿದಿದ್ದರು. ಕಳೆದ ಮೇ ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಕೂಡಾ ಅದನ್ನೇ ಮಾಡಿತ್ತು. ಕಳೆದ ವರ್ಷದ ಜುಲೈ ತಿಂಗಳಲ್ಲಿ ನಡೆದ ಗವರ್ನಿಂಗ್ ಕೌನ್ಸಿಲ್ ಮೀಟಿಂಗ್ ನಲ್ಲಿ ಮುಖ್ಯಮಂತ್ರಿಗಳು ಆರು ತಿಂಗಳುಗಳ ಕಾಲ ಡಾ.ಮಂಜುನಾಥ್ ಅವರ ಸೇವಾ ಅವಧಿಯನ್ನು ವಿಸ್ತರಿಸಿದ್ದರು.
ಆದರೆ, ಯಾವಾಗ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿತೋ ಮತ್ತು ಮೈತ್ರಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಅವರು ಕಣಕ್ಕಿಳಿಯಲಿದ್ದಾರೆ ಎನ್ನುವ ಸುದ್ದಿ ಹರಿದಾಡಲಾರಂಭಿಸಿತೋ, ಅವರ ಸೇವಾ ಅವಧಿಯನ್ನು ಮತ್ತೆ ಸರ್ಕಾರ ವಿಸ್ತರಣೆ ಮಾಡಲು ಹೋಗಲಿಲ್ಲ. ಇನ್ನೊಂದು ಕಡೆ, ಜಯದೇವ ಆಸ್ಪತ್ರೆಯ ಕಳೆದ ಹತ್ತು ವರ್ಷದ ಅವಧಿಯಲ್ಲಿನ ಬುಕ್ ಆಫ್ ಅಕೌಂಟ್ಸ್ ಮತ್ತು ಇತರ ವ್ಯವಹಾರಗಳ ಪಾರದರ್ಶಕತೆಯನ್ನು ತನಿಖೆಗೆ ಒಳಪಡಿಸುವ ಚಿಂತನೆ ಮುಖ್ಯಮಂತ್ರಿಗಳು ಮಾಡಿದ್ದಾರೆಂದು ಹೇಳಲಾಗುತ್ತಿದೆ.