Election Bond Case : ಎಸ್. ಬಿ. ಐ. ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ(ಸುಪ್ರೀಂ ಕೋರ್ಟ್) ಆದೇಶವನ್ನು ಪಾಲಿಸದಿರುವುದಕ್ಕಾಗಿ ಮತ್ತು ಚುನಾವಣಾ ಬಾಂಡ್ ದಾನಿಗಳ ವಿವರಗಳನ್ನು ಮಾರ್ಚ್ 6 ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಬಹಿರಂಗಪಡಿಸದಿರುವುದಕ್ಕಾಗಿ ಸುಪ್ರೀಂ ಕೋರ್ಟ್ ಇಂದು ಎಸ್. ಬಿ. ಐ. ಗೆ ತರಾಟೆಗೆ ತೆಗೆದುಕೊಂಡಿದೆ.
ಇದನ್ನೂ ಓದಿ: Dakshina Kannada: ಮಲಗಿದ್ದಲೇ ಹೃದಯಾಘಾತದಿಂದ ಸಾವಿಗೀಡಾದ ಯುವಕ
ಚುನಾವಣಾ ಬಾಂಡ್ ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30ರವರೆಗೆ ಕಾಲಾವಕಾಶ ಕೋರಿ ಎಸ್. ಬಿ. ಐ. ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಅವುಗಳನ್ನು ಸಲ್ಲಿಸಲು ಮಾರ್ಚ್ 12ರ ವರೆಗೂ ಕಾಲಾವಕಾಶ ನೀಡಿತ್ತು. ಮಾರ್ಚ್ 15ರಂದು ಸಂಜೆ 5 ಗಂಟೆಯೊಳಗೆ ತನ್ನ ಅಧಿಕೃತ ಜಾಲತಾಣದಲ್ಲಿ ಮಾಹಿತಿಯನ್ನು ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಇಸಿಐಗೆ ಸೂಚಿಸಿದೆ.
“ಕಳೆದ 26 ದಿನಗಳಲ್ಲಿ ನೀವು ಯಾವ ಕ್ರಮಗಳನ್ನು ಕೈಗೊಂಡಿದ್ದೀರಿ? ನಿಮ್ಮ ಅರ್ಜಿಯು ತೆಗೆದುಕೊಂಡು ಕ್ರಮಗಳ ಬಗ್ಗೆ ಮೌನವಾಗಿದೆ “ಎಂದು ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಪ್ರಶ್ನಿಸಿದೆ.
ಈ ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ನ್ಯಾಯಾಲಯದ ತೀರ್ಪಿನ ಪ್ರಕಾರ ದಾಖಲೆಗಳನ್ನು ಬಹಿರಂಗಪಡಿವಂತೆ ಎಸ್. ಬಿ. ಐ. ಗೆ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ. ಆರ್. ಗವಾಯಿ, ಜೆ. ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು, “ಎಸ್. ಬಿ. ಐ. ಕೇವಲ ಮೊಹರು ಮಾಡಿದ ಲಕೋಟೆಯನ್ನು ತೆರೆಯಬೇಕು, ವಿವರಗಳನ್ನು ಒಟ್ಟುಗೂಡಿಸಿ ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ನೀಡಬೇಕು” ಎಂದು ಹೇಳಿದೆ.
ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸುವ ಮೊದಲು ರಾಜಕೀಯ ಪಕ್ಷಗಳು ಎನ್ಕ್ಯಾಶ್ ಮಾಡಿದ ಪ್ರತಿ ಚುನಾವಣಾ ಬಾಂಡ್ನ ವಿವರಗಳನ್ನು ಬಹಿರಂಗಪಡಿಸಲು ಎಸ್. ಬಿ. ಐ. ಗೆ ಜೂನ್ 30 ರವರೆಗೆ ವಿಸ್ತರಣೆಯನ್ನು ಕೋರಿತ್ತು.