CAA: ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ?!
CAA: ದೇಶಾದ್ಯಂತ ನಿನ್ನೆ (ಮಾ.11) ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು(CAA) ಜಾರಿಗೆ ತಂದಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಈ ಕಾಯ್ದೆಯನ್ನು ವಾಪಸ್ ಪಡೆಯುವ ಮಾತನಾಡಿದೆ.
ಹೌದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅದಿಕಾರಕ್ಕೆ ಬಂದರೆ ಬಿಜೆಪಿ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
ಈ ಕುರಿತು ಕಾಂಗ್ರೆಸ್ ನಾಯಕ ಶಶಿ ತರೂರ್(Shashi tar)ru ಅವರು ಪ್ರತಿಕ್ರಿಯಿಸಿದ್ದು, ಬಿಜೆಪಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ನೈತಿಕವಾಗಿ ಹಾಗೂ ಸಾಂವಿಧಾನಿಕವಾಗಿ ತಪ್ಪು ನಿರ್ಧಾರವಾಗಿದೆ. ಹೀಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳ ಪೈಕಿ ಸಿಎಎ ವಾಪಸ್ ಕೂಡ ಸೇರಿಸಲಾಗುತ್ತದೆ. ಎಂದು ಶಶಿ ತರೂರ್ ಹೇಳಿದ್ದಾರೆ.
IAS Intresting Question: ಮದುವೆಯ ನಂತರ ಹುಡುಗನಲ್ಲಿ ಶಾಶ್ವತವಾಗಿ ಇರುತ್ತೆ, ಆದರೆ ಹುಡುಗಿಗೂ ಅದು ಸಿಗುತ್ತೆ, ಏನದು…
ಏನಿದು ಪೌರತ್ವ ತಿದ್ದುಪಡಿ ಕಾಯ್ದೆ ?
ಪೌರತ್ವ (ತಿದ್ದುಪಡಿ) ಮಸೂದೆ 2019, 1955ರಲ್ಲಿ ಜಾರಿಗೆ ತರಲಾಗಿದ್ದ ನಾಗರಿಕ ಕಾಯ್ದೆಗೆ ತಿದ್ದುಪಡಿಯಾಗಿದೆ. ಮುಸ್ಲಿಂ ಧರ್ಮೀಯರು ಬಹುಸಂಖ್ಯೆಯಲ್ಲಿರುವ ನಮ್ಮ ನೆರೆಯ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನಗಳ ಮುಸ್ಲಿಂಯೇತರ ನಿರಾಶ್ರಿತರಿಗೆ, ಅಲ್ಲಿ ಧಾರ್ಮಿಕ ಹಿಂಸೆ ಮತ್ತು ಕಿರುಕುಳಕ್ಕೆ ಒಳಗಾಗಿ ಜೀವನ ನಡೆಸಲು ಸಾಧ್ಯವಾಗದೆ ಭಾರತಕ್ಕೆ ಆಶ್ರಯ ಕಂಡುಕೊಂಡು ಬಂದಿರುವ ನಾಗರಿಕರಿಗೆ ಭಾರತದ ಪೌರತ್ವ ನೀಡುವ ಮಸೂದೆಯಾಗಿದೆ. ಒಂದು ಬಾರಿ ಈ ತಿದ್ದುಪಡಿ ವಿದೇಯಕ ಜಾರಿಗೆ ಬಂದರೆ ಈ ಮೂರೂ ದೇಶಗಳ ಹಿಂದೂ, ಸಿಖ್, ಕ್ರೈಸ್ತ, ಬೌದ್ಧ, ಜೈನ ಮತ್ತು ಪಾರ್ಸಿ ಸಮುದಾಯದ ವಲಸಿಗರಿಗೆ ಭಾರತದ ಪೌರತ್ವ ಸಿಗುತ್ತದೆ. ಅವರು ಅಕ್ರಮ ವಲಸಿಗರು ಎಂದು ನಂತರ ಪರಿಗಣಿಸಲಾಗುವುದಿಲ್ಲ.