Shiradi Ghat Accident: ಶಿರಾಡಿಘಾಟ್‌ನಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ, ಗ್ಯಾಸ್‌ ಸೋರಿಕೆ, ವಾಹನ ಸಂಚಾರ ಸ್ಥಗಿತ

Shiradi Ghat: ಶಿರಾಡಿ ಘಾಟ್‌ನಲ್ಲಿ ಗ್ಯಾಸ್‌ ಟ್ಯಾಂಕರೊಂದು ಪಲ್ಟಿಯಾಗಿ ಬಿದ್ದಿರುವ ಪರಿಣಾಮ ಗ್ಯಾಸ್‌ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: Rameshwaram Cafe: ಬೆಂಗಳೂರು ಕೆಫೆ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು : ಟ್ರಾವೆಲಿಂಗ್ ಹಿಸ್ಟರಿ ಆಧಾರದ ಮೇಲೆ ಒರ್ವ ವ್ಯಕ್ತಿಯನ್ನು ಬಂಧಿಸಿದ ಎನ್ಐಎ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಬಿದ್ದಿದ್ದು, ಅದರಲ್ಲಿ ಗ್ಯಾಸ್‌ ಸೋರಿಕೆಯಾಗುತ್ತಿದೆ. ಈ ಕಾರಣದಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರ ನಿಲ್ಲಿಸಲಾಗಿದೆ.

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ‌ : ಬೆಡ್ ರೂಮ್ನಲ್ಲಿ ಡ್ರಗ್ಸ್ ವಶ

ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪೊಲೀಸರು ವಾಹನಗಳನ್ನು ಬದಲಿ ಮಾರ್ಗದಲ್ಲಿ ತೆರಳುವಂತೆ ಸೂಚಿಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಗ್ಯಾಸ್‌ ಸೋರಿಕೆ ಉಂಟಾಗಿದ್ದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಉರಿಸದಂತೆ , ಬೆಂಕಿ ಕಡ್ಡಿ ಗೀರದಂತೆ ಎಚ್ಚರಿಕೆ ವಹಿಸಲಾಗಿದೆ. ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದ ಮೂಲಕ ಪೊಲೀಸರು ಕಳುಹಿಸುತ್ತಿದ್ದಾರೆ.

ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ಎಂಆರ್‌ಪಿಎಲ್‌ ನಿಂದ ತಜ್ಞರ ತಂಡ ಬರಲಿದೆ. ಭಾರೀ ಪ್ರಮಾಣ ಗ್ಯಾಸ್‌ ಸೋರಿಕೆಯಾಗಿದ್ದು, ಗ್ಯಾಸ್‌ ಟ್ಯಾಂಕರ್‌ ತೆರವು ಕಾರ್ಯಾಚಾರಣೆ ಮುಗಿಯುವವರೆಗೆ ಸಂಚಾರ ಬಂದ್‌ ಮಾಡಲಾಗಿದೆ.

ಬದಲಿ ಮಾರ್ಗ ವ್ಯವಸ್ಥೆ ಇಲ್ಲಿದೆ;
ಮಂಗಳೂರು ಧರ್ಮಸ್ಥಳಕ್ಕೆ ಹೋಗುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಬೇಕು.
ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಬೇಕು.

1 Comment
  1. […] ಇದನ್ನೂ ಓದಿ: Shiradi Ghat Accident: ಶಿರಾಡಿಘಾಟ್‌ನಲ್ಲಿ ಗ್ಯಾಸ್‌ ಟ್… […]

Leave A Reply

Your email address will not be published.