Karnataka politics: ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ !!

Share the Article

Karnataka politics: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ನಿನ್ನೆ ಕಾಂಗ್ರೆಸ್ ಸೇರ್ಪಡೆಯಾದರು. ಇವರೊಂದಿಗೆ ಬಿಜೆಪಿ ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ(BA Sukumar shetty) ಮತ್ತು ಎಂಪಿ ಕುಮಾರಸ್ವಾಮಿ(M P Kumarswamy)ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಇದನ್ನೂ ಓದಿ: CM Siddaramaiah: ಕರ್ನಾಟಕಕ್ಕೆ ನೀರು ಉಳಿಸಿಕೊಳ್ಳದೇ ತಮಿಳುನಾಡಿಗೆ ನೀರು ಬಿಡುವುದಿಲ್ಲ : ಸಿದ್ಧಾರಾಮಯ್ಯ

Karnataka Politics

ಇದನ್ನೂ ಓದಿ: BJP: ಈ 10 ಮಂದಿ ಮಾಜಿ ಸಚಿವರಿಗೆ BJPಯಿಂದ MP ಟಿಕೆಟ್!!

ಹೌದು, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ(Jayaprakash hegde) ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾದರು. 2017ರಲ್ಲಿ ಬಿಜೆಪಿಯ ಜತೆ ಕೈಜೋಡಿಸಿದ್ದ ಜಯಪ್ರಕಾಶ್‌ ಹೆಗ್ಡೆ ಅವರು ಇದೀಗ ಘರ್‌ ವಾಪ್ಸಿಯಾಗಿದ್ದಾರೆ. ಇನ್ನು ವಿಧಾನಸಭೆ ಚುನಾವಣೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಬಿಜೆಪಿ(BJP)ಯಿ ತೊರೆದು ಜೆಡಿಎಸ್‌(JDS) ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಕೂಡ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ

ಇನ್ನು ಜಯಪ್ರಕಾಶ್‌ ಹೆಗ್ಡೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಿವೆ. ಈ ಹಿಂದೆ 2009 ಮತ್ತು 2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಉಡುಪಿ- ಚಿಕ್ಕಮಗಳೂರು ಸಂಸದರಾಗಿದ್ದ ಸದಾನಂದ ಗೌಡ ಅವರು ಅಚಾನಕ್ ಆಗಿ ಸಿಎಂ ಆದರು. ಈ ಸಂದರ್ಭದಲ್ಲಿ ಅವರು ರಾಜೀನಾಮೆ ನೀಡಿದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ನಿಂದ ಸಂಸದರಾಗಿ ಆಯ್ಕೆ ಆದರು.

Leave A Reply