K S Eshwarappa: ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ ವಿರುದ್ಧ ಬಂಡಾಯ ಸ್ಪರ್ಧೆ ಸುಳಿವು ಕೊಟ್ಟ ಕೆಎಸ್ ಈಶ್ವರಪ್ಪ!
K S Eshwarappa: ಲೋಕಸಭಾ ಚುನಾವಣೆಯಲ್ಲಿ(Parliament election) ಹಾವೇರಿ(Haveri)ಯಿಂದ ಸ್ಪರ್ಧಿಸಲು ಬಯಸಿರುವ, ಮಾಜಿ ಸಚಿವ, ಬಿಜೆಪಿ ನಾಯಕ ಈಶ್ವರಪ್ಪನವರ(K S Eshwarappa)ಪುತ್ರ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗುವುದು ಡೌಟ್ ಎನ್ನುವ ವಿಚಾರ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಈಶ್ವರಪ್ಪನವರು ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಬಗ್ಗೆ ಸುಳಿವು ನೀಡಿದ್ದಾರೆ.
ಇದನ್ನೂ ಓದಿ: Physical Contact: ಗಂಡ-ಹೆಂಡತಿಯ ಸಾಮರ್ಥ್ಯ ದುಪ್ಪಟ್ಟಾಗಲು ಮನೆಯಲ್ಲೇ ಸಿಗುವ ಇದನ್ನು ತಿಂದರೆ ಸಾಕು !!
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್(Kantesh) ಗೆ ಟಿಕೆಟ್ ಗಾಗಿ ಈಶ್ವರಪ್ಪನವರು ಲಾಬಿ ನಡೆಸುತ್ತಿದ್ದು, ಟೆಂಪಲ್ ರನ್ ನಡೆಸಿದ್ದಾರೆ. ಆದರೆ ಟಿಕೆಟ್ ಮಿಸ್ ಆಗಬಹುದು ಎಂಬ ಸುದ್ದಿ ಹರಡುತ್ತಿದ್ದಂತೆ ಮಾಜಿ ಸಚಿವ ಈಶ್ವರಪ್ಪ ಬಂಡಾಯ ಸ್ಪರ್ಧೆಗೆ ಸಿದ್ದತೆ ನಡೆಸಿದ್ದಾರೆ. ಈ ಬಗ್ಗೆ ಸುಳಿವು ಕೂಡ ನೀಡಿದ್ದಾರೆ.
ಹೌದು, ಶಿವಮೊಗ್ಗ(Shivamogga) ಲೋಕಸಭಾ ಕ್ಷೇತ್ರದಿಂದ ಬಂಡಾಯವಾಗಿ ಕಣಕ್ಕಿಳಿಯಲು ತೆರೆಮರೆಯ ಸಿದ್ಧತೆ ನಡೆಸುತ್ತಿರುವುದು ಸ್ಪಷ್ಟವಾಗಿದೆ. ಇಂದು ಈ ಬಗ್ಗೆ ಶಿವಮೊಗ್ಗದಲ್ಲಿ ರಾಷ್ಟ್ರ ಭಕ್ತರ ಬಳಗದ ಹೆಸರಿನಲ್ಲಿ ಸಭೆ ಕರೆದ ಈಶ್ವರಪ್ಪ ಅವರು, ಬೆಂಬಲಿಗರು ಬಂಡಾಯ ಸ್ಫರ್ಧೆ ಬಗ್ಗೆ ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಎಲ್ಲರ ಜೊತೆಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸದ ಅವರು ಬಂಡಾಯ ಸ್ಪರ್ಧೆಯ ಬಗ್ಗೆ ಚರ್ಚೆ ಆಗಿರುವುದು ಹೌದು. ನಾನು ಬಿಜೆಪಿಯಲ್ಲಿ ಸೀನಿಯರ್ ಮೋಸ್ಟ್ ಎನ್ನುವುದು ಹೌದು. ನಾನು ಏನು ಕ್ರಮ ತೆಗೆದುಕೊಳ್ಳಬೇಕು ಎಂಬುವುದರ ಬಗ್ಗೆ ನನ್ನ ಹಿತೈಷಿಗಳು ಚರ್ಚೆ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಸ್ಪರ್ಧೆ ಬೇಡ ಎಂದಾಗ ನಾನು ಒಪ್ಪಿಕೊಂಡಿದ್ದೆ. ಅಂದು ಪಕ್ಷದ ವರಿಷ್ಠರು ಫೋನ್ ಮಾಡಿದಾಗ ಒಪ್ಪಿಕೊಂಡಿದ್ದೆ. ಈಗ ಕೊಟ್ಟ ಮಾತಿಗೆ ಎಲ್ಲರೂ ಬದ್ಧರಾಗಬೇಕೆಂದು ಅವರು ತಿಳಿಸಿದ್ದಾರೆ.
ಇಷ್ಟೇ ಅಲ್ಲದೆ ಕೆಲ ದಿನದ ಹಿಂದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಿಜೆಪಿಯ ಕಾರ್ಯಕರ್ತರು, ಚರ್ಚೆಯ ಬಳಿಕ ಒಂದು ವೇಳೆ ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ನೀಡದಿದ್ದರೆ ಶಿವಮೊಗ್ಗ ಕ್ಷೇತ್ರದಿಂದಲೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಗೆಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಶಿವಮೊಗ್ಗದಲ್ಲಿ ಈಶ್ವರಪ್ಪ ಅವರನ್ನೂ ಕಣಕ್ಕಿಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.