Parliament election: ರಾಜ್ಯದಲ್ಲಿ ಉಳಿದ 8ರ ಪೈಕಿ ಈ 5 ಕ್ಷೇತ್ರಗಳ ಹಾಲಿ ಸಂಸದರಿಗೂ ಬಿಜೆಪಿ ಟಿಕೆಟ್ ಮಿಸ್ !!
Parliment electionಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು ಕರ್ನಾಟಕದ 20ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗಿದೆ. ಆದರೆ ಕೆಲವು ಕ್ಷೇತ್ರಗಳಿಗೆ ಬಿಜೆಪಿಯು ಅಚ್ಚರಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಬೆನ್ನಲ್ಲೇ ಇನ್ನುಳಿದ 8ರ ಪೈಕಿ ಈ 5ಕ್ಷೇತ್ರಗಳ ಹಾಲಿ ಸಂಸದರಿಗೂ ಬಿಜೆಪಿ ಟಿಕೆಟ್ ಮಿಸ್ ಆಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ.
ಹೌದು, ಈಗಾಗಲೇ ಬಿಜೆಪಿ(BJP)ಯಿಂದ 20ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಆಗಿದೆ. ಇನ್ನುಳಿದ 8 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಾದ ಕೋಲಾರ, ಹಾಸನ, ಮಂಡ್ಯ ಜೆಡಿಎಸ್ ಪಾಲಾಗಲಿದ್ದು ಬಾಕಿ ಉಳಿದ ಚಿತ್ರದುರ್ಗ, ಬೆಳಗಾವಿ, ಚಿಕ್ಕಬಳ್ಳಾಪುರ, ರಾಯಚೂರು, ಉತ್ತರ ಕನ್ನಡದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಬಹುದು ಎನ್ನಲಾಗುತ್ತಿದೆ.
• ಚಿತ್ರದುರ್ಗ: ಚಿತ್ರದುರ್ಗದಿಂದ ಕೇಂದ್ರ ಸಚಿವ ಹಾಲಿ ಸಂಸದ ಎ.ನಾರಯಣಸ್ವಾಮಿ ಚುನಾವಣೆ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದಾರೆ ಎನ್ನಲಾಗಿದೆ.
• ಬೆಳಗಾವಿ: ಬೆಳಗಾವಿಯಲ್ಲಿ ಸದ್ಯ ಮಂಗಳಾ ಅಂಗಡಿ (mangala Angadi) ಸಂಸದೆಯಾಗಿದ್ದಾರೆ. ಪತಿ ಸುರೇಶ್ ಅಂಗಡಿ (Suresh Angadi) ನಿಧನ ಹಿನ್ನೆಲೆ ಮಂಗಳಾ ಅಂಗಡಿಗೆ ಟಿಕೆಟ್ ನೀಡಲಾಗಿತ್ತು. ಆದರೀಗ ಈ ಭಾರಿ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ಎನ್ನಲಾಗಿದೆ. ಮಹಾಂತೇಶ್ ಕವಟಿಗಿಮಠ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.
• ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ (Chikkaballapur) ವಯೋ ಸಹಜ ಅನಾರೋಗ್ಯದ ಕಾರಣಗಳಿಂದ ಚುನಾವಣೆ ರಾಜಕೀಯಕ್ಕೆ ಹಾಲಿ ಸಂಸದ ಬಚ್ಚೆಗೌಡ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಸಚಿವ ಡಾ. ಸುಧಾಕರ್ ಸೇರಿ ಹಲವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
• ರಾಯಚೂರು: ರಾಯಚೂರಿನಲ್ಲೂ ರಾಜಾ ಅಮರೇಶ ನಾಯಕ್ ಸಂಸದರಾಗಿದ್ದು, ಅಭ್ಯರ್ಥಿಯ ಬದಲಾವಣೆ ಕೂಗು ಕ್ಷೇತ್ರದಲ್ಲಿ ಕೇಳಿ ಬಂದಿದೆ. ಮಾಜಿ ಸಂಸದ ಬಿ.ವಿ ನಾಯಕ್ ಹೆಸರು ಇಲ್ಲಿ ಕೇಳಿ ಬಂದಿದೆ.
• ಉತ್ತರ ಕನ್ನಡದ : ಉತ್ತರ ಕನ್ನಡದಲ್ಲಿ ಕಳೆದ ನಾಲ್ಕು ವರ್ಷಗಳ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಸಂಸದ ಅನಂತ ಕುಮಾರ್ ಹೆಗೆಡೆ ಈಗ ವಿವಾದಗಳ ಮೂಲಕ ಚರ್ಚೆಯ ಕೇಂದ್ರ ಬಿಂದುವಾಗಿದ್ದಾರೆ. ಹೀಗಾಗಿ ಈ ಸಲ ಹೆಗಡೆಗೆ ಟಿಕೆಟ್ ಸಿಗೋದು ಡೌಟ್ ಎನ್ನಲಾಗಿದೆ.
ಇನ್ನು ಬಿಜೆಪಿಯು ತನ್ನ ಎರಡನೆ ಪಟ್ಟಿಯಲ್ಲಿ ಹಾಲಿ ಸಂಸದರಿಗೆ ಶಾಕ್ ಕೊಟ್ಟಿದೆ. ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡ, ಸಿದ್ದೇಶ್ವರ್, ಕರಡಿ ಸಂಗಣ್ಣ ಸೇರಿ ಒಂಭತ್ತು ಮಂದಿ ಸಂಸದರಿಗೆ ಕೊಕ್ ಕೊಡಲಾಗಿದೆ.