DK Shivakumar: ಬಿಜೆಪಿ ಬೆಳವಣಿಗೆಯ ಕುರಿತು ಕಾದು ನೋಡುವ ತಂತ್ರ : ಡಿ ಕೆ ಶಿವಕುಮಾರ್

Share the Article

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಕಾವು ಹೆಚ್ಚುತ್ತಿರುವ ಹಿನ್ನೆಲೆ ಇದೀಗ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಒಂದು ಹೇಳಿಕೆ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದೆ.

ಇದನ್ನೂ ಓದಿ: BS Yediyurappa: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಯುಡಿಯೂರಪ್ಪ ವಶಕ್ಕೆ ಪಡೆಯುವ ಕುರಿತು ಗೃಹ ಸಚಿವರಿಂದ ಮಹತ್ವದ ಹೇಳಿಕೆ

ಬಿಜೆಪಿಯಲ್ಲಿನ 10 ಮಂದಿ ಹಾಲಿ ಸಂಸದವರಿಗೆ ಟಿಕೆಟ್ ಕೈತಪ್ಪಲಿದೆ ಎಂದು ಆಗ ಹೇಳಿದ್ದೆ, ಅದು ಈಗ ಸತ್ಯವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರು ಕಾಂಗ್ರೆಸ್ ನತ್ತ ಮುಖ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.

ಕಾಂಗ್ರೆಸ್ ಗೆಲುವಿಗೆ ಬಿಜೆಪಿ ಟಿಕೆಟ್ ವಂಚಿತರ ಸೇರ್ಪಡೆ ಸದ್ಯಕ್ಕೆ ಗುಟ್ಟಾಗಿಯೇ ಇರಲಿ. ಮುಂದಿನ ದಿನಗಳಲ್ಲಿ ಟಿಕೆಟ್ ವಂಚಿತ ಅಭ್ಯರ್ಥಿಗಳು ಕಾಂಗ್ರೆಸ್ ಸೇರ್ಪಡೆಗೊಳ್ಳಲು ಇಚ್ಚಿಸಿದರೆ ಅವರಿಗೆ ಖಂಡಿತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಮುಂದುವರೆದು ಸದ್ಯಕ್ಕೆ ಬಿಜೆಪಿ ಪಕ್ಷದ ಬೆಳವಣಿಗೆಯನ್ನು ಕಾದು ನೋಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಬಿಜೆಪಿ ರೆಬೆಲ್ ನಾಯಕರು ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Leave A Reply