7th Pay Commission : ಸರ್ಕಾರಕ್ಕೆ 7ನೇ ವೇತನ ಆಯೋಗದ ವರದಿ ಸಲ್ಲಿಕೆ – ಇಷ್ಟು ಹೆಚ್ಚಾಗಲಿದೆ ಸರ್ಕಾರಿ ನೌಕರರ ಸಂಬಳ !!
7th Pay Commission : ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗವು ಇಂದು ಸರ್ಕಾರಕ್ಕೌ ವರದಿಯನ್ನು ಸಲ್ಲಿಸಿದ್ದು, ಆಯೋಗವು ವೇತನದ ಶೇ.27.5ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ದೊರೆತಿದೆ.
ಹೌದು, ಇಂದು ಸುಧಾಕರ್ ರಾವ್ ನೇತೃತ್ವದ ರಾಜ್ಯದ 7ನೇ ವೇತನ ಆಯೋಗವು (7th Pay Commission) ಇಂದು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ(CM Siddaramaiah) ಸಲ್ಲಿಸಿದ್ದು, ಮೂಲವೇತನದ 27.5% ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವರದಿ ಪಡೆದು ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ್ದೇವೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17,000 ರೂ. ಗಳಿಂದ 27,000 ರೂ.ಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದ್ದು ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿವೆ. ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
ಅಂದಹಾಗೆ ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯೋಗದಿಂದ ವರದಿ ಪಡೆದಿದ್ದಾರೆ.