Lok Sabha Election 2024: ಲೋಕಸಭೆ ಚುನಾವಣಾ ದಿನಾಂಕ ಘೋಷಣೆ; ಯಾವಾಗ ರಿಸಲ್ಟ್‌? ಇಲ್ಲಿದೆ ಕಂಪ್ಲೀಟ್‌ ವಿವರ

General Election 2024: ಲೋಕಸಭಾ ಚುನಾವಣೆಗೆ ಅಖಾಡ ರಂಗೇರಿದ್ದು, ಇಡೀ ದೇಶವೇ ಎದುರು ನೋಡುತ್ತಿರುವ ಸಾರ್ವತ್ರಿಕ ಚುನಾವಣೆಗೆ ಇಂದು ಮುಹೂರ್ತ ನಿಗದಿ ಆಗಿದೆ. ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದೆ. ವಿಜ್ಞಾನಭವನದ ಹಾಲ್‌ನಲ್ಲಿ ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಿಸಿದ್ದು ಎಪ್ರಿಲ್‌ 19 ರಿಂದ ಚುನಾವಣೆ ನಡೆಯಲಿದ್ದು, ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ಕ್ಕೆ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.

ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಉತ್ತರ ಕರ್ನಾಟಕದಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಸುದ್ದಿಗೋಷ್ಠಿ ನಡೆಸಿ ವಿವರಗಳನ್ನು ಪ್ರಕಟ ಮಾಡಿದ್ದಾರೆ. ಕರ್ನಾಟಕದಲ್ಲಿ ಎರಡು ಹಂತದ ಮತದಾನ ನಡೆಯಲಿದ್ದು, ಎಪ್ರಿಲ್‌ 26 ರಂದು ಮೊದಲ ಹಂತದ ಮತದಾನ ಮೇ.7 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಈಶ್ವರಪ್ಪ ಪ್ರತ್ಯೇಕ ಸ್ಪರ್ಧೆ ಕುರಿತು ಕೇಂದ್ರ ನಾಯಕರಿಂದ ಮೊದಲ ಪ್ರತಿಕ್ರಿಯೆ ಹೀಗಿತ್ತು !!

ಏಪ್ರಿಲ್‌ 26ರಂದು ಮತದಾನ ನಡೆಯುವ ಕ್ಷೇತ್ರಗಳು: ದಕ್ಷಿಣ ಕರ್ನಾಟಕ
1.ಹಾಸನ (ಸಾಮಾನ್ಯ)
2.ದಕ್ಷಿಣ ಕನ್ನಡ (ಸಾಮಾನ್ಯ)
3.ಚಿತ್ರದುರ್ಗ (ಪರಿಶಿಷ್ಟ ಜಾತಿ ಮೀಸಲು)
4..ತುಮಕೂರು (ಸಾಮಾನ್ಯ)
5.ಮಂಡ್ಯ (ಸಾಮಾನ್ಯ)
6.ಮೈಸೂರು-ಕೊಡಗು (ಸಾಮಾನ್ಯ)
7.ಚಾಮರಾಜನಗರ (ಪರಿಶಿಷ್ಟ ಜಾತಿ ಮೀಸಲು)
8. ಬೆಂಗಳೂರು ಗ್ರಾಮಾಂತರ (ಸಾಮಾನ್ಯ)
9 ಬೆಂಗಳೂರು ಉತ್ತರ (ಸಾಮಾನ್ಯ)
10. ಬೆಂಗಳೂರು ಕೇಂದ್ರ (ಸಾಮಾನ್ಯ)
11. ಬೆಂಗಳೂರು ದಕ್ಷಿಣ (ಸಾಮಾನ್ಯ)
12.ಚಿಕ್ಕಬಳ್ಳಾಪುರ (ಸಾಮಾನ್ಯ)
13.ಕೋಲಾರ (ಪರಿಶಿಷ್ಟ ಜಾತಿ ಮೀಸಲು)

ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು: ಉತ್ತರ ಕರ್ನಾಟಕ
1.ಚಿಕ್ಕೋಡಿ (ಸಾಮಾನ್ಯ)
2.ಬೆಳಗಾವಿ (ಸಾಮಾನ್ಯ)
3.ಬಾಗಲಕೋಟೆ (ಸಾಮಾನ್ಯ)
4.ಬಿಜಾಪುರ (ಪರಿಶಿಷ್ಟ ಜಾತಿ ಮೀಸಲು)
5.ಕಲಬುರಗಿ (ಪರಿಶಿಷ್ಟ ಜಾತಿ ಮೀಸಲು)
6.ರಾಯಚೂರು(ಪರಿಶಿಷ್ಟ ಪಂಗಡ ಮೀಸಲು)
7.ಬೀದರ್ (ಸಾಮಾನ್ಯ) ಕೊಪ್ಪಳ (ಸಾಮಾನ್ಯ)
8.ಬಳ್ಳಾರಿ (ಪರಿಶಿಷ್ಟ ಪಂಗಡ ಮೀಸಲು)
9. ಹಾವೇರಿ (ಸಾಮಾನ್ಯ)
10.ಧಾರವಾಡ (ಸಾಮಾನ್ಯ)
11.ಉತ್ತರ ಕನ್ನಡ (ಸಾಮಾನ್ಯ)
12.ದಾವಣಗೆರೆ (ಸಾಮಾನ್ಯ)
13.ಶಿವಮೊಗ್ಗ (ಸಾಮಾನ್ಯ)

543 ಲೋಕಸಭೆ ಕ್ಷೇತ್ರಗಳಲ್ಲಿ ಎಲ್ಲೆಲ್ಲಿ ಮತದಾನ ನಡೆಯಲಿರುವ ಕುರಿತು ವಿವರಣೆ ನೀಡಿದ್ದು, ಒಟ್ಟು 28 ರಾಜ್ಯಗಳು ಜೊತೆಗೆ 8 ಕೇಂದ್ರಾಡಳಿತ ಪ್ರದೇಶ ಸೇರಿ 36 ರಾಜ್ಯಗಳಲ್ಲಿ ಚುನಾವಣಾ ಹಂತಗಳನ್ನು ಚುನಾವಣಾ ಆಯೋಗ ವಿವರಿಸಿದೆ.

ವೃದ್ಧರು, ಅಂಗವಿಕಲರಿಗೆ ಮನೆಯಿಂದಲೇ ಮತ ಚಲಾವಣೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌ ತಿಳಿಸಿದ್ದಾರೆ.

85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು, 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ವೀಲ್‌ಚೇರ್‌ ವ್ಯವಸ್ಥೆ, ಸ್ವಯಂಸೇವಕರೂ ಇರಲಿದ್ದಾರೆ ಎಂಬ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ: ಲೋಕ ಸಭಾ ಚುನಾವಣೆ 2024; ಕರ್ನಾಟಕದಲ್ಲಿ 02 ಹಂತಗಳಲ್ಲಿ ಚುನಾವಣೆ! ದಿನಾಂಕ, ಇನ್ನಷ್ಟು ಮಾಹಿತಿ ಇಲ್ಲಿದೆ

1.8 ಕೋಟಿ ಮತದಾರರು ಮೊದಲ ಬಾರಿಗೆ ಮತ ಹಾಕಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ ಎಂದು ಹೇಳಿದ್ದು. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾವಣೆ ಮಾಡಲಿದ್ದಾರೆ. 19.74 ಕೋಟಿ ಯುವ ಮತದಾರರ ಮತ ಚಲಾಯಿಸಲಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಚುನಾವಣಾ ಆಯೋಗವು ಕಳೆದ ಬಾರಿ 2019 ರ ಲೋಕಸಭೆ ಚುನಾವಣೆಯ ದಿನಾಂಕ ಮತ್ತು ವೇಳಾಪಟ್ಟಿಯನ್ನು ಮಾರ್ಚ್‌ 10 ರಂದು ಪ್ರಕಟ ಮಾಡಿತ್ತು. ಅಂದು ಏಳು ಹಂತಗಳಲ್ಲಿ ಚುನಾವಣೆ ನಡೆದು, ಎಪ್ರಿಲ್‌ 11 ರಿಂದ ಮೇ.19 ರ ತನಕ ಮತದಾನ ನಡೆಯಿತು. ಮೇ.23 ರಂದು ಫಲಿತಾಂಶ ಪ್ರಕಟವಾಗಿತ್ತು.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ 2019 ರ ಎಪ್ರಿಲ್‌ 18 ಮತ್ತು 23 ರಂದು ತಲಾ 14 ಕ್ಷೇತ್ರಗಳ ಮತದಾನ ನಡೆದಿದ್ದು, 25ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು, ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ 1ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಸಾಧಿಸುತ್ತು. ಒಟ್ಟು 28 ಕ್ಷೇತ್ರಗಳಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಸಿಗುತ್ತಿದ್ದಂತೆ ಯದುವೀರ್ ಒಡೆಯರ್ ಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ 

Leave A Reply

Your email address will not be published.