Political News: ಬಿಜೆಪಿಗೆ ಬಾಕಿ ಉಳಿಸಿಕೊಂಡಿರುವ ಈ 5 ಕ್ಷೇತ್ರಗಳು ಇದೀಗ ಮಗ್ಗಲ ಮುಳ್ಳಾಗಿ ಬಿಜೆಪಿಗೆ ಚುಚ್ಚುತ್ತಿವೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಇದೀಗ ಬಿಜೆಪಿ ಬಾಕಿ ಉಳಿಸಿಕೊಂಡಿರುವ ಐದು ಕ್ಷೇತ್ರಗಳು ಬಿಜೆಪಿಗೆ ಕಗ್ಗಂಟಾಗಿ ಕಾಡಲಿವೆಯ? ಎಂಬ ಪ್ರಶ್ನೆ ಮೂಡುತ್ತಿದೆ.

ಇದನ್ನೂ ಓದಿ: JC Madhuswamy: ತುಮಕೂರಿನಲ್ಲಿ ಹೊರಗಡೆಯಿಂದ ಬಂದು ಗೆದ್ದವರಿಲ್ಲ : ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ

ರಾಜ್ಯದಲ್ಲಿನ ಒಟ್ಟಾರೆ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಳಗಾವಿ, ಉತ್ತರ ಕನ್ನಡ, ರಾಯಚೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿದಿದೆ. ಈ ಪೈಕಿ ಬೆಳಗಾವಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟ‌ರ್ ಅವರ ಹೆಸರು ಬಹುತೇಕ ಅಂತಿಮಗೊಂಡತಾಗಿದೆ. ಆದರೆ ಸಳೀಯ ಕೆಲವು ಮುಖಂಡರು ವಿರೋಧಿಸಿದರೂ ಶೆಟ್ಟರ್‌ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ. ಆದರೆ, ಇತರೆ ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಬಗೆಹರಿಸುವ ಯಾವುದೇ ಪ್ರಯತ್ನ ಇನ್ನೂ ಯಶಸ್ಸು ಕಂಡಿಲ್ಲ.

ಇದನ್ನೂ ಓದಿ: Mandya: ಬಿಜೆಪಿ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸಬಹುದು : ಮಗನ ಸ್ಪರ್ದೆಯ ಕುರಿತು ಸುಳಿವು ನೀಡಿದ ಎಚ್. ಡಿ. ಕುಮಾರ ಸ್ವಾಮಿ

ಈಗಾಗಲೇ ಉತ್ತರ ಕನ್ನಡ ಕ್ಷೇತ್ರದಿಂದ ಹಾಲಿ ಸಂಸದರಾಗಿರುವ ಅನಂತಕುಮಾರ್‌ ಹೆಗಡೆ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಬಹುತೇಕ ಕ್ಷೀಣಿಸಿದ್ದು, ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರು ಹೆಚ್ಚಾಗಿ ಕೇಳಿ ಬರುತ್ತಿದೆ. ಇವರ ಜೊತೆಗೆ ನಮೋ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ಆದರೆ, ಈ ವಿಷಯದಲ್ಲಿ ಪಕ್ಷದಲ್ಲಿ ಎರಡು ಬಣಗಳು ಪರ ವಿರೋಧದ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದರಿಂದ ವಿಳಂಬವಾಗುತ್ತಿದೆ ಎನ್ನಲಾಗಿದೆ.

ಇನ್ನು ರಾಯಚೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಅಮರೇಶ್ ನಾಯಕ್ ಅವರನ್ನು ಕಣಕ್ಕಿಳಿಸುವ ಸಂಭವ ಕಂಡು ಬರುತ್ತಿಲ್ಲ. ಪಕ್ಷ ಸಂಘಟನೆಗೆ ಅವರಿಂದ ಅನುಕೂಲವಾಗುತ್ತಿಲ್ಲ ಎಂಬ ಅಪಸ್ವರ ಕೇಳಿಬರುತ್ತಿದ್ದು, ಪರ್ಯಾಯ ಅಭ್ಯರ್ಥಿಗಾಗಿ ಪರಿಶೀಲನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಪೈಕಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್‌ಮತ್ತು ಮಾಜಿ ಸಂಸದ ಬಿ.ವಿ.ನಾಯಕ್ ಅವರ ಬಗ್ಗೆ ಚರ್ಚೆ ನಡೆದಿದೆ. ಬಿ.ವಿ.ನಾಯಕ್ ಅವರು ಕಳೆದ ವಿಧಾನಸಭಾ ಚುನಾವಣೆವೇಳೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಆಗಮಿಸಿದರು. ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಪಡೆದು ಸೋಲುಂಡರು. ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ಒಲಿಯಲಿದೆ ಎಂಬುದು ಕುತೂಹಲಕರವಾಗಿದೆ.

ಚಿತ್ರದುರ್ಗ ಕ್ಷೇತ್ರದಿಂದ ಹಾಲಿ ಸಂಸದರಾಗಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂಬ ಮಾತನ್ನು ಪಕ್ಷದ ನಾಯಕರಿಗೆ ಹೇಳಿದ್ದರಿಂದ ಆ ಕ್ಷೇತ್ರವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಅವರಿಗೆ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಆಸೆಯಿದೆ. ಜತೆಗೆ ನಾರಾಯಣಸ್ವಾಮಿ ಅವರು ಕ್ಷೇತ್ರದ ಜನರಿಗೆ ಸಿಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿತ್ತು. ಈ ಕ್ಷೇತ್ರದಿಂದ ಮಾದಿಗ ಸಮುದಾಯದವರಿಗೇ ಟಿಕೆಟ್ ನೀಡಿದರೆ ಅನುಕೂಲವಾತ್ತದೆ ಎಂಬ ಉದ್ದೇಶದಿಂದ ನಾರಾಯಣಸ್ವಾಮಿ ಅವರನ್ನೇ ಮನವೊಲಿಸುವ ಪ್ರಯತ್ನವೂ ಸಹ ನಡೆದಿದೆ.

ಇನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡರು ನಿವೃತ್ತಿ ಘೋಷಿಸಿರು ವುದರಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ನಡುವೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಇವರಿಬ್ಬರನ್ನು ಹೊರತುಪಡಿಸಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಚಿಕ್ಕಬಳ್ಳಾಪುರ ಟಿಕೆಟ್ ನೀಡಬೇಕೆಂಬ ಕೂಗು ಸಹ ಕೇಳಿಬರುತ್ತಿದೆ. ಯಾರು ಅಂತಿಮವಾಗಿ ಅಭ್ಯರ್ಥಿಯಾಗುತ್ತಾರೆ ಎಂಬುದು ಕುತೂಹಲವಾಗಿಯೇ ಉಳಿದಿದೆ.

2 Comments
  1. […] ಇದನ್ನೂ ಓದಿ: Political News: ಬಿಜೆಪಿಗೆ ಬಾಕಿ ಉಳಿಸಿಕೊಂಡಿರುವ ಈ 5 … […]

  2. […] ಇದನ್ನೂ ಓದಿ: Political News: ಬಿಜೆಪಿಗೆ ಬಾಕಿ ಉಳಿಸಿಕೊಂಡಿರುವ ಈ 5 … […]

Leave A Reply

Your email address will not be published.