Home Karnataka State Politics Updates Tushar Giri Nath: ಲೋಕಸಭಾ ಚುನಾವಣೆ, ಬೆಂಗಳೂರಿನಲ್ಲಿ ಅಲರ್ಟ್‌ ; ನೀತಿ ಸಂಹಿತೆ ಜಾರಿ

Tushar Giri Nath: ಲೋಕಸಭಾ ಚುನಾವಣೆ, ಬೆಂಗಳೂರಿನಲ್ಲಿ ಅಲರ್ಟ್‌ ; ನೀತಿ ಸಂಹಿತೆ ಜಾರಿ

Hindu neighbor gifts plot of land

Hindu neighbour gifts land to Muslim journalist

Tushar Giri Nath: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಲಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಮೇಲೆ ನಿಗಾವಹಿಸಲು ಸೂಚಿಸಲಾಗಿದೆ. ಸರಕಾರಿ ಕಚೇರಿ, ಸರಕಾರಿ ಆಸ್ತಿಗಳು ಸೇರಿ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನು ತೆಗೆಯಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಫ್ಲೆಕ್ಸ್‌, ಪೋಸ್ಟರ್‌, ಬ್ಯಾನರ್‌, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿ ಇನ್ನಿತರ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ. ಜೊತೆಗೆ ಸರಕಾರದ ವೆಬ್‌ಸೈಟ್‌ಗಳಲ್ಲಿ 24 ಗಂಟೆಯ ಒಳಗೆ ರಾಜಕೀಯ ಪ್ರತಿನಿಧಿಗಳ ಭಾವಚಿತ್ರ ತೆಗೆಯಲು, RO,ARO ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನು ಸಕ್ರಿಯಗೊಳಿಸಲು ಸಭೆಯಲ್ಲಿ ಸೂಚಿಸಲಾಗಿದೆ.