Parliament Election : ದಕ್ಷಿಣ ಕನ್ನಡದಲ್ಲಿ ಪ್ರಬಲ ಸಮುದಾಯದ ಈ ವ್ಯಕ್ತಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್ !!

Parliament Electionಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಚುನಾವಣಾ ಪ್ರಚಾರ ಕೂಡ ಆರಂಭಿಸಿದೆ. ಆದರೆ ಕಾಂಗ್ರೆಸ್(Karnataka Congress)ಮಾತ್ರ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ, ಇನ್ನುಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗದೆ ಸುಮ್ಮನಾಗಿದೆ. ಆದರೂ ಕೆಲವೊಂದು ಹೈವೋಲ್ಟೇಜ್ ಕ್ಷೇತ್ರಗಳಿಗೆ ಕೆಲವು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಅಂತೆಯೇ ದ.ಕ ಲೋಕಸಭಾ ಕ್ಷೇತ್ರಕ್ಕೂ ಕೂಡ.

ರಾಜ್ಯದಲ್ಲಿ ಹಿಂದುತ್ವದ ಭದ್ರ ಕೋಟೆಯಾಗಿರುವ ದ. ಕ(Dakshina kannada) ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯು ಮಾಜಿ ಸೇನಾ ನಾಯಕ ಬ್ರಿಜೇಶ್ ಚೌಟ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿ ಕಾಂಗ್ರೆಸ್ ಗೆ ಸವಾಲೆಸೆದಿದೆ. ಆದರೆ ಈ ಬೆನ್ನಲ್ಲೇ ಕಾಂಗ್ರೆಸ್ ಕೂಡ ಅಲರ್ಟ್ ಆಗಿದ್ದು ಅವರಷ್ಟೇ ಬಲಾಬಲದ ಅಭ್ಯರ್ಥಿಯನ್ನು ಸಮರಕ್ಕೆ ಅಣಿಮಾಡುತ್ತಿದೆ. ಹೀಗಾಗಿ ಈ ಬಾರಿ ಬಿಲ್ಲವ ಸಮುದಾಯದ ನಾಯಕನಿಗೆ ಮಣೆ ಹಾಕಲು ಪ್ಲಾನ್ ಮಾಡಿದೆ ಎಂದು ತಿಳಿದುಬಂದಿದೆ.

ಹೌದು, ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ(Janardhana poojari) ಅವರ ಆಪ್ತರಾಗಿರುವ ಪದ್ಮರಾಜ್ ರಾಮಯ್ಯ (Padmaraj Ramaiah) ಅವರಿಗೆ ಟಿಕೆಟ್ ನೀಡಲು ಪಕ್ಷದ ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದ್ದಾಗಿ ಸುದ್ದಿ ಸಂಸ್ಥೆ ಡೈಜಿವರ್ಲ್ಡ್ ವರದಿ ಮಾಡಿದೆ.

ಅಂದಹಾಗೆ 2019 ರ ಚುನಾವಣೆಯಲ್ಲಿ ಕಾಂಗ್ರೆಸ್ ಕೂಡ ಬಂಟ್ ಸಮುದಾಯದ ಮಿಥುನ್ ರೈ ಅವರನ್ನು ಕಣಕ್ಕಿಳಿಸಿತ್ತು. ಆದರೆ, ಮೋದಿ ಅಲೆಗೆ ಮಿಥುನ್ ರೈ ಸೋಲು ಅನುಭವಿಸಿದ್ದರು. ಆದರೆ, ಈ ಬಾರಿ ತಂತ್ರಗಾರಿಕೆಯಲ್ಲಿ ಬದಲಾವಣೆ ಮಾಡಿದ ಕಾಂಗ್ರೆಸ್, ಜಿಲ್ಲೆಯ ಅತಿ ದೊಡ್ಡ ಸಮುದಾಯವಾದ ಬಿಲ್ಲವ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಪ್ರಬಲ ಪೈಪೋಟಿ ನಡೆಸಲು ಪ್ಲಾನ್ ಮಾಡಿದ್ದು ಪದ್ಮರಾಜ್ ರಾಮಯ್ಯ (Padmaraj Ramaiah) ಅವರಿಗೆ ಟಿಕೆಟ್ ಫಿಕ್ಸ್ ಎನ್ನಲಾಗುತ್ತಿದೆ.

ಅದಾಗ್ಯೂ, ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ಸುಧಾಕರ್ ಅವರಂತಹ ಅನುಭವಿ ಅಭ್ಯರ್ಥಿಗಳು ಟಿಕೆಟ್ ರೇಸ್ನಲ್ಲಿದ್ದಾರೆ. ಆದರೆ ಹೈಕಮಾಂಡ್ ನಿರ್ಧಾರ ಏನೆಂದು ಕಾದುನೋಡಬೇಕಿದೆ.

Leave A Reply

Your email address will not be published.