BJP-JDS: ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಬಿರುಕು, ಕುಮಾರಸ್ವಾಮಿಯಿಂದ ಅಚ್ಚರಿ ಹೇಳಿಕೆ!!
BJP-JDS: ಮುಂದಿನ ತಿಂಗಳು ನಡೆಯಲಿರುವ ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್(BJP-JDS) ಪಕ್ಷಗಳು ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಸೆಣೆಸಲು ಸಜ್ಜಾಗಿವೆ. ಆದರೆ ಇದೀಗ ಸೀಟು ಹಂಚಿಕೆ ವಿಚಾರವಾಗಿ ಎರಡೂ ಪಕ್ಷಗಳ ನಡುವೆ ಕೊಂಚ ವೈಮನಸ್ಸು ಉಂಟಾಗಿದೆ.
ಇದನ್ನೂ ಓದಿ: Congress Meeting: ಕಾಂಗ್ರೆಸ್ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಹೌದು, ಬಿಜೆಪಿ ಈಗಾಗಲೇ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇನ್ನುಳಿದ 8 ಕ್ಷೇತ್ರಗಳ ಪೈಕಿ 5 ಬಿಜೆಪಿಗೆ, 3 ಜೆಡಿಎಸ್ ಗೆ ಎನ್ನಲಾಗಿತ್ತು. ಅದರಲ್ಲಿ ಕೋಲಾರ, ಮಂಡ್ಯ ಹಾಗೂ ಹಾಸನ ಸೇರಿತ್ತು. ಆದರೀಗ ಕೊನೇ ಹಂತದಲ್ಲಿ ಜೆಡಿಎಸ್‌ಗೆ ಕೋಲಾರದ ಟಿಕೆಟ್ ಅನುಮಾನವಾಗಿದ್ದು ಮಂಡ್ಯ ಮತ್ತು ಹಾಸನದ ಸ್ಪರ್ಧೆಗೆ ಸೀಮಿತವಾಗುವ ಸನ್ನಿವೇಶ ನಿರ್ಮಾಣವಾಗಿದೆ. ಜೆಡಿಎಸ್ ಹಿರಿಯರಿಗೆ ಇದು ಅಸಮಾಧಾನ ತಂದಿದ್ದು ಹಳೆ ಮೈಸೂರು ಭಾಗದಲ್ಲಿ ಪಕ್ಷ ಪ್ರಬಲವಾಗಿದ್ದರೂ ಬಿಜೆಪಿ ಯೊಂದಿಗೆ ಹೋಗಿ ಇಂಥ ಸ್ಥಿತಿ ತಂದುಕೊಳ್ಳುವ ಅಗತ್ಯವಿತ್ತಾ ಎಂಬ ಆಕ್ಷೇಪ ವ್ಯಕ್ತವಾಗಿದೆ.
ಇದರೊಂದಿಗೆ ಇಷ್ಟು ದಿನ ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ(HD Kumarswamy)ಅವರು ‘ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ತೆಗೆದುಕೊಳ್ಳಲು ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಸ್ವತಂತ್ರವಾಗಿ ಸ್ಪರ್ಧಿಸಿದರೂ ಹಾಸನ ಹಾಗೂ ಮಂಡ್ಯದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಸೋಮವಾರ ನಗರದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಬಳಿ ನಾವೇನು 6-7 ಸ್ಥಾನಗಳನ್ನು ಕೇಳಿಲ್ಲ. ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ರಾಜ್ಯದ 18 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದೆ. ಅದನ್ನು ಬಳಸಿಕೊಳ್ಳುವಂತೆ ಬಿಜೆಪಿಗೆ ಹೇಳುತ್ತೇನೆ ಎಂದರು.
ಮತ್ತೊಂದೆಡೆ ಜೆಡಿಎಸ್(JDS) ಪಕ್ಷದ ಚುನಾವಣಾ ಉಸ್ತುವಾರಿ, ಸಹ ಉಸ್ತುವರಿಗಳು ಹಾಗೂ ಕೋರ್ ಕಮಿಟಿ ಸದಸ್ಯರುಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಗ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಮುಂದೆ ಏನಾಗುತ್ತದೆ, JDS ಗೆ ಎಷ್ಟು ಸೀಟು ಸಿಗುತ್ತದೆ ಎಂದು ಕಾದುನೋಡಬೇಕಿದೆ.