B N Bacche Gowda: ಬಿಜೆಪಿಗೆ ರಾಜೀನಾಮೆ ನೀಡಿದ ಚಿಕ್ಕಬಳ್ಳಾಪುರದ ಹಾಲಿ ಸಂಸದ ಬಚ್ಚೇಗೌಡ !!
B N Bacche Gowda: ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಚಿಕ್ಕಬಳ್ಳಾಪುರದ ಹಾಲಿ ಸಂಸದ ಬಚ್ಚೇಗೌಡ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: DV Sadanada Gowda: ನಾನು ಬಿಜೆಪಿ ಬಿಡುವುದಿಲ್ಲ, ಕಾಂಗ್ರೆಸ್ ಸೇರುವುದಿಲ್ಲ : ಮಾಜಿ ಸಚಿವ ಡಿ. ವಿ. ಸದಾನಂದ
ಹೌದು, ಈ ಹಿಂದೆಯೇ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ (B.N.Bache Gowda) ಬಿಜೆಪಿ (BJP) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ (Vijayendra) ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಇದನ್ನೂ ಓದಿ: Delhi: ದರೆಗುರುಳಿದ ಎರಡು ಅಂತಸ್ತಿನ ಕಟ್ಟಡ : ಇಬ್ಬರ ಸಾವು
ಭಾರತೀಯ ಜನತಾ ಪಾರ್ಟಿಯ (BJP) ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಸದರಿ ರಾಜೀನಾಮೆಯನ್ನು (Resigns) ಅಂಗೀಕರಿಸಬೇಕೆಂದು ಈ ಮೂಲಕ ತಮ್ಮನ್ನು ಕೋರುತ್ತೇನೆ. 2008ರಲ್ಲಿ ಬಿಜೆಪಿ ಪಾರ್ಟಿಯಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ, ಸಚಿವನಾಗಿ ಮತ್ತು 2019ರಲ್ಲಿ ಸಂಸದನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬಚ್ಚೇಗೌಡ ಅವರು ತಿಳಿಸಿದ್ದಾರೆ.
ಅಂದಹಾಗೆ ಚುನಾವಣಾ (Election) ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡದಿರಲು ಬಚ್ಚೇಗೌಡ ನಿರ್ಧರಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.