Congress : ಕಾಂಗ್ರೆಸ್ 2 ಪಟ್ಟಿ ಬಿಡುಗಡೆ – ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ!!

Congress : ಲೋಕಸಭಾ ಚುನಾವಣೆಗೆ(Parliament election )ಕಾಂಗ್ರೆಸ್(Congress)2ನೇ ಪಟ್ಟಿ ಬಿಡುಗಡೆಯಾಗಿದ್ದು ಕರ್ನಾಟಕ ಒಟ್ಟು 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

ಇದನ್ನೂ ಓದಿ: Arvind kejriwal: ಅರೆಸ್ಟ್ ಆಗುವುದರಲ್ಲಿ ಕೂಡಾ ದಾಖಲೆ ಬರೆದ ಅರವಿಂದ್ ಕೇಜ್ರಿವಾಲ್, ಮುಖ್ಯಮಂತ್ರಿಯಾಗಿರುವಾಗಲೇ ಅರೆಸ್ಟ್ ಆದ ಮೊದಲ ಸಿಎಂ !!

ಹೌದು, ಮಾ. 8ರಂದು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆದರಲ್ಲಿ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗಿತ್ತು. ಇದೀಗ ಬಹುನಿರೀಕ್ಷಿತ ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಉಳಿದಿದ್ದ 21 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ತನ್ನ 2ನೇ ಪಟ್ಟಿಯಲ್ಲಿ ಕಾಂಗ್ರೆಸ್ ಪ್ರಕಟಿಸಿದೆ.

ಇದನ್ನೂ ಓದಿ: Terrible Accident: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಮೂರು ಜನ ದಾರುಣ ಸಾವು

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳು:

* ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ

* ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ

* ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌

* ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌

* ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ

* ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ

* ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌

* ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌

* ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ

* ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ

* ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌

* ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ

* ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌

* ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ

* ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್‌ ಜಿ ನಾಯಕ್‌

* ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್‌

* ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ

ಅಂದಹಾಗೆ ಈ ಬಾರಿ ಪ್ರಭಾವಿ ಸಚಿವರ ಸಂಬಂಧಿಕರಿಗೆ ಬಹುತೇಕ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಪ್ರಮುಖವಾಗಿ ಸಚಿವರಾದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೋಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ರವೀಂದ್ರ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ್‌ ಗೆ ಟಿಕೆಟ್ ನೀಡಲಾಗಿದೆ.

ಮೊದಲ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್‌?

ಮೊದಲ ಪಟ್ಟಿಯಲ್ಲಿ ಬಿಜಾಪುರದಿಂದ ಎಚ್.ಆರ್. ಅಲಗೂರು, ಹಾವೇರಿಯಿಂದ ಆನಂದಸ್ವಾಮಿ ಗಡ್ಡದೇವರ ಮಠ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್, ಹಾಸನದಿಂದ ಶ್ರೇಯಸ್ ಪಟೇಲ್, ತುಮಕೂರಿನಿಂದ ಎಸ್.ಪಿ. ಮುದ್ದಹನುಮೇಗೌಡ, ಮಂಡ್ಯದಿಂದ ವೆಂಕಟರಾಮೇ ಗೌಡ (ಸ್ಟಾರ್ ರಾಜು) ಅವರಿಗೆ ಟಿಕೆಟ್ ನೀಡಲಾಗಿತ್ತು.

Leave A Reply

Your email address will not be published.