Dakshina Kananda (Mangaluru): ನಂತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಸಂಪೂರ್ಣ ನಜ್ಜುಗುಜ್ಜು, ವ್ಯಕ್ತಿ ಸಾವು

Mangaluru: ನಂತೂರಿನಲ್ಲಿ ತಡರಾತ್ರಿ ಭೀಕರ ಅಪಘಾತವೊಂದು ನಡೆದಿದ್ದು, ಈ ಅಪಘಾತದಲ್ಲಿ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್‌ ಅವರ ಮೊಮ್ಮಗ ಶಮಿತ್‌ ಶೆಟ್ಟಿ (29) ಯಾನೆ ಬಂಟಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.

ಇದನ್ನೂ ಓದಿ: Love Tragedy: ಅವರಿಬ್ಬರದ್ದು ನಿರ್ಮಲ ಪ್ರೇಮ; ಅದಕ್ಕೆ ಅಡ್ಡಿಯಾಗಿತ್ತು ಅಂತಸ್ತು, ಅಣ್ಣಂದಿರಿಂದ ಮಾಸ್ಟರ್‌ ಪ್ಲ್ಯಾನ್‌, ಪ್ರಿಯಕರ ಮರ್ಡರ್‌

ನಿನ್ನೆ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಮಿತ್‌ ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೃತ ಹೊಂದಿದ್ದಾರೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್‌ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: Uttar Pradesh: ಮದರಸಾ ಕಾಯ್ದೆ ಅಸಾಂವಿಧಾನಿಕ : ಹೈಕೋರ್ಟ್

ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.