Ayodhya Rama Mandir: ಅಯೋಧ್ಯೆ ರಾಮಮಂದಿರ ಟ್ರಸ್ಟ್ ನಿಂದ ಮತ್ತೊಂದು ಮಹತ್ವದ ನಿರ್ಧಾರ – ಭಕ್ತರಿಗೆ ಖುಷಿಯೋ ಖುಷಿ !!

Ayodhya Rama Mandir: ದೇಶದ ಜನ ಹೋಳಿ ಹಬ್ಬದ ಸಂಭ್ರಮದಲ್ಲಿದೆ. ಬಣ್ಣಗಳಲ್ಲಿ ಮಿಂದೇಳುತ್ತಿದೆ. ಈ ಬೆನ್ನಲ್ಲೇ ಅಯೋಧ್ಯೆಯ ರಾಮಮಂದಿರ ಟ್ರಸ್ಟ್ ಭಕ್ತಾದಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.

ಇದನ್ನೂ ಓದಿ: K S Eshwarappa: ಈಶ್ವರಪ್ಪ ಪಕ್ಷೇತರ ಸ್ಪರ್ಧೆಗೆ ಕಾಂಗ್ರೆಸ್ ಬೆಂಬಲ !!

ಹೌದು, ಆಯೋಧ್ಯೆ ರಾಮಮಂದಿ(Ayodhya Rama Mandir)ರದಲ್ಲಿ ಶ್ರೀ ರಾಮಲಲ್ಲಾ(Ramalalla) ಪ್ರಾಣಪ್ರತಿಷ್ಠೆ ಬಳಿಕ ಅದ್ಧೂರಿಯಾಗಿ ಹೋಳಿ ಹಬ್ಬ ಆಚರಣೆ ಮಾಡಲು ಟ್ರಿಸ್ಟ್ ನಿರ್ಧರಿಸಿದೆ. ಇದಕ್ಕಾ ಭಾರೀ ತಯಾರಿ ನಡೆಸಲಾಗಿದೆ. ಭಕ್ತರು ಹೋಳಿ(Holi) ಹಬ್ಬದಲ್ಲಿ ಪಾಲ್ಗೊಳ್ಳಲು ವಿಶೇಷ ಅವಕಾಶ ಕಲ್ಪಿಸಲಾಗಿದ್ದು ಪ್ರಸಾದ ಕೂಡ ವಿತರಿಸಲಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ.

ಇದನ್ನೂ ಓದಿ: Holi colour to Muslim lady: ಮುಸ್ಲಿಂ ಮಹಿಳೆಗೆ ಹೋಳಿ ಬಣ್ಣ ಬಳಿದ ಹುಡುಗರು- ಮೈನರ್ ಹುಡುಗರ ಸಹಿತ ನಾಲ್ವರ ಬಂಧನ !

ಈ ಕುರಿತಂತೆ ರಾಮ ಮಂದಿರ ಪ್ರಧಾನ ಅರ್ಚಕ ಅಚಾರ್ಯ ಸತ್ಯೇಂದ್ರ ದಾಸ್(Satyendra Das) ಈ ಕುರಿತು ಮಾಹಿತಿ ನೀಡಿದ್ದು, ಶ್ರೀರಾಮನಿಗೆ ಮೊದಲ ಹೋಳಿ ಹಬ್ಬ ಆಚರಣೆಯಾಗಿದೆ. ಹೀಗಾಗಿ ವಿಶೇಷವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಹೋಳಿ ಹಬ್ಬ ಆಚರಣೆ ವೇಳೆ ರಾಮಲಲ್ಲಾಗೆ ಬಣ್ಣ ಹಚ್ಚಲಾಗುತ್ತದೆ. ಇದೇ ವೇಳೆ ಕಚೋರಿ, ಗುಜಿಯಾ, ಪುರಿ, ಕಡುಬು ಸೇರಿದಂತೆ ಇತರ ಭಕ್ಷ್ಯಗಳನ್ನು ನೈವೇದ್ಯಗಳೊಂದಿಗೆ ಅರ್ಪಿಸಲಾಗುತ್ತದೆ. ವಿಶೇಷ ಪೂಜೆ ಬಳಿಕ ಈ ಪ್ರಸಾದವನ್ನು ರಾಮ ಭಕ್ತರಿಗೆ ವಿತರಿಸಲಾಗುತ್ತದೆ. ಶಾಸ್ತ್ರೋಕ್ತವಾಗಿ ಹಬ್ಬ ಆಚರಿಸಲಾಗುತ್ತಿದ್ದು ಭಕ್ತರು ಸಹಕರಿಸಬೇಕು ಎಂದು ಹೇಳಿದ್ದಾರೆ.

Leave A Reply

Your email address will not be published.