Death News: ಹೋಳಿ ಸಂಭ್ರಮಾಚರಣೆ ಬಳಿಕ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವು

Death News: ಹೋಳಿ ಹಬ್ಬದ ಸಲುವಾಗಿ ಬಣ್ಣ ಹಾಕಿಕೊಂಡು ನದಿಯಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ

ಇದನ್ನೂ ಓದಿ: Shivmoga: ಆತ್ಮ ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ ಶಿವಮೊಗ್ಗ ಪೋಲಿಸರು

ಹೈದರಾಬಾದ್’ನ ಕುಮುರಂ ಭೀಮ್ ಆಸಿಫಾಬಾದ್ ಜಿಲ್ಲೆಯ ವಾರ್ಧಾ ನದಿಯಲ್ಲಿ ನಡೆದಿದೆ.

ನಾಲ್ವರು ಯುವಕರ ತಂಡ ಹೋಳಿ ಸಂಭ್ರಮಾಚರಣೆ ಮುಗಿಸಿಕೊಂಡು ನದಿಯಲ್ಲಿ ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Minister Shivraj Thandagi:ಮೋದಿ ಮೋದಿ ಎಂದು ಜಪ ಮಾಡುವ ಯುವಕರ ಕಪಾಳಕ್ಕೆ ಹೊಡೆಯಬೇಕು :  ಸಚಿವ ಶಿವರಾಜ್ ತಂಗಡಗಿ

ದುರಾದೃಷ್ಟವಶಾತ್ ಅವರಲ್ಲಿ ಯಾರಿಗೂ ಈಜು ಬಾರದ ಕಾರಣ ಒಬ್ಬರ ಹಿಂದೆ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಮುರಂ ಭೀಮ್ ಆಸಿಫಾಬಾದ್ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಸುರೇಶ್ ಕುಮಾ‌ರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮೃತರು 22-25ರ ವಯೋಮಾನದವರು ಎನ್ನಲಾಗಿದೆ. ಸ್ಥಳೀಯ ಮೀನುಗಾರರು ಮತ್ತು ಈಜುಗಾರರ ಸಹಾಯದಿಂದ ಪೊಲೀಸರು ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇವರೆಲ್ಲರೂ ಪಾನಮತ್ತರಾಗಿದ್ದರು ಎಂದು ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.