Veena Kashappanavar: ಕಾಂಗ್ರೆಸ್’ಗೆ ಮುಳುವಾದ ಕಾಂಗ್ರೆಸ್ ಶಾಸಕನ ಪತ್ನಿ !!
Veena Kashappanavar: ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಕಾಂಗ್ರೆಸ್ ಮಹಿಳಾ ನಾಯಕಿ, ಕಾಂಗ್ರೆಸ್ ಶಾಸಕನ ಪತ್ನಿ ವೀಣಾ ಕಾಶಪ್ಪನವರ್(Veena Kashappanavr) ಗೆ ಟಿಕೆಟ್ ಮಿಸ್ ಆದ ಹಿನ್ನೆಲೆಯಲ್ಲಿ ಅವರು ಬಾಗಲಕೋಟೆಯಿಂದ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕನ ಪತ್ನಿಯೇ ರಾಜ್ಯ ಕಾಂಗ್ರೆಸ್ ಪಾರ್ಟಿಗೆ ಮುಳುವಾಗಿದ್ದಾರೆ.
ಇದನ್ನೂ ಓದಿ: K S Eshwarappa: ಮತ್ತೊಂದು ಹೊಸ ಘೋಘಣೆ ಹೊರಡಿಸಿದ ಈಶ್ವರಪ್ಪ !!
ಹೌದು, ಬಾಗಲಕೋಟೆಯಿಂದ(Bagalakote) ಕಾಂಗ್ರೆಸ್, ಸಂಯುಕ್ತಾ ಪಾಟೀಲ್‌ಗೆ(Samyukta Patil) ಲೋಕಸಭಾ ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಭಾರೀ ನಿರಾಸೆಗೊಂಡ ವೀಣಾ ಕಾಶಪ್ಪನವರ್ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಮುಟ್ಟಿಸಲು ರೆಡಿಯಾಗಿದ್ದಾರೆ. ಪಕ್ಷವು ಟಿಕೆಟ್ ನಿರಾಕರಿಸಿದ್ದಕ್ಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ದೊಡ್ಡ ಆಘಾತ ಎದುರಾಗಿದೆ.
ವೀಣಾ ಅವರು ಪಕ್ಷೇತರವಾಗಿ ಸ್ಪರ್ಧಿಸುವುದನ್ನು ಅನೌನ್ಸ್ ಮಾಡಿದ ಬಳಿಕ ಎಚ್ಚೆತ್ತ ಕಾಂಗ್ರೆಸ್ ಕೆಪಿಸಿಸಿ(KPCC) ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ(Vinay kulakarni) ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆಸಿದೆ. ಆದರೂ ಕೂಡ ಇದು ಯಶಸ್ವಿಯಾಗಿಲ್ಲ. ಸಭೆ ಬಳಿಕ ವೀಣಾ ಕಾಶಪ್ಪನವರ್ ಮಾತನಾಡಿ, ನಾನು ಮಹಿಳೆ ಆಗಿದ್ದಕ್ಕೆ ನನಗೆ ಅನ್ಯಾಯ ಆಗುತ್ತಿದೆ. ಮಹಿಳೆಯರಿಗೆ ಗ್ಯಾರಂಟಿ ಯೋಜನೆ ಜಾರಿಗೆ ಮಾಡಿ, ಮಹಿಳೆಗೆ ಅನ್ಯಾಯ ಮಾಡುತ್ತಿದ್ದಾರೆ. ಅಲ್ಲದೆ ಮಾರ್ಚ್ 28ರವರೆಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಅಭ್ಯರ್ಥಿಯನ್ನು ಬದಲಾಯಿಸಲು ಅವಕಾಶ ನೀಡಿದ್ದಾರೆ. ಅಭ್ಯರ್ಥಿ ಬದಲಾವಣೆಯಾಗದಿದ್ದರೆ ಚುನಾವಣಾ ಕಣದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ ಬಾಗಲಕೋಟೆಯಿಂದ ಬೇರೆಯವರಿಗೆ ಟಿಕೆಟ್ ಸಿಕ್ಕಿರುವುದು ಕೇವಲ ತನ್ನ ಸಮುದಾಯ ಮಾತ್ರವಲ್ಲ ಬೇರೆ ಸಮುದಾಯದ ಜನರಿಗೂ ಆಘಾತವುಂಟು ಮಾಡಿದೆ, ಕಳೆದ 5 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ತನಗೆ ಹೇಗೆ ಟಿಕೆಟ್ ತಪ್ಪುವುದು ಸಾಧ್ಯ ಅಂತ ಬೇರೆ ಬೇರೆ ಜಿಲ್ಲೆಗಳ ಜನ ಸಹ ಫೋನ್ ಮಾಡಿ ಕೇಳುತ್ತಿದ್ದಾರೆ. ಹೀಗಾಗಿ ನನಗೆ ಜನ ಬೆಂಬಲ ಇದೆ, ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.
ಅಂದಹಾಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿರುವ ವಿಜಯಪುರದ ಶಿವಾನಂದ್ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಗೆ ಬಾಗಲಕೋಟೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಸಂಯುಕ್ತ ಬಾಗಲಕೋಟೆಯವರೇ ಅಲ್ಲ ಎಂದು ಸ್ಥಳೀಯ ಕಾಂಗ್ರೆಸ್ ನವರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.