Rameshwaram Cafe Blast: ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್‌ಐಎ ದಾಳಿ
Rameshwaram Cafe Blast: ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕುರಿತು ಇದೀಗ ಮಹತ್ವದ ಮಾಹಿತಿಯೊಂದು ತಿಳಿದು ಬಂದಿದೆ. ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಇದನ್ನೂ ಓದಿ: Postal Ballot: ಅಂಚೆ ಮತದಾನ ಎಂದರೇನು, ಯಾರು ಇದನ್ನು ಬಳಸಬಹುದು? ತಿಳಿದುಕೊಳ್ಳಿ
ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಬೆಂಗಳೂರಿನಿಂದ ಹೊರಟ ಐದು ವಾಹನದಲ್ಲಿ ಬಂದ ಎನ್‌ಐಎ ತಂಡ ತನಿಖೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ 15 ಕ್ಕೂ ಹೆಚ್ಚು ಎನ್‌ಐಎ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಸ್ಥಳೀಯ ಪೊಲೀಸರ ನೆರವಿನ ಮೂಲಕ ಕೆಲ ಶಂಕಿತರ ಮನೆಗಳಲ್ಲಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಸ್ಫೋಟ ಪ್ರಕರಣಕ್ಕೆ ಕುರಿತು ಕೆಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: Mallapuram: ಎರಡು ವರ್ಷದ ಬಾಲಕಿ ಮೃತ ಪ್ರಕರಣ; ತಂದೆ ಫೈಝ್ ಬಂಧನ