Home Karnataka State Politics Updates Tejswini Gowda: ಧಿಡೀರ್ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ...

Tejswini Gowda: ಧಿಡೀರ್ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ !!

Tejswini Gowda

Hindu neighbor gifts plot of land

Hindu neighbour gifts land to Muslim journalist

Tejaswini Gowda: ಲೋಕಸಭೆ ಚುನಾವಣೆ(Parliament Election)ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ವಿಧಾನ ಪರಿಷತ್ ಬಿಜೆಪಿ(BJP) ಸದಸ್ಯೆ ತೇಜಸ್ವಿನಿ ಗೌಡ(Tejaswini Gowda) ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: Ananth Kumar Hegde: ಅನಂತ್ ಕುಮಾರ್ ಹೆಗಡೆಗೆ ರಾಜ್ಯದ ಮುಖ್ಯಮಂತ್ರಿ ಪಟ್ಟ !!

ಹೌದ, ತೇಜಸ್ವಿನಿ ಗೌಡ ಅವರು ವಿಧಾನ್ ಪರಿಷತ್(Vidhana Parishath) ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ಆದರೆ ಮೈಸೂರು -ಕೊಡಗು ಕ್ಷೇತ್ರದಿಂದ ಟಿಕೆಟ್ ಮಿಸ್ ಆಗಿದ್ದಕ್ಕೆ ಬಿಜೆಪಿಗೆ ಗುಡ್ ಬೈ ಹೇಳಲು ತೇಜಸ್ವಿನಿಗೌಡ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕಿಯೇ ತಮ್ಮ ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bengaluru: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ :‌ 13 ಸರ್ಕಾರಿ ಅಧಿಕಾರಿಗಳ 60 ಸ್ಥಳಗಳ ಮೇಲೆ ದಾಳಿ

ಈ ಬಗ್ಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ(Basavarj Horatti) ಪ್ರತಿಕ್ರಿಯಿಸಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿಗೌಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ. ಸ್ವಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ತೇಜಸ್ವಿನಿ ಹೇಳಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದು, ತೇಜಸ್ವಿನಿ ಗೌಡ ಅವರ ಅವಧಿ ಇನ್ನೊಂದು ತಿಂಗಳಲ್ಲಿ ಮುಕ್ತಾಯಗೊಳ್ಳುತ್ತಿತ್ತು. ಎಲ್ಲಾ ಸ್ಥಾನಮಾನ ಕೊಟ್ಟರೆ ಭಾರತೀಯ ಜನತಾ ಪಕ್ಷ ಒಳ್ಳೆಯದು. ಸ್ಥಾನಮಾನ ಕೊಡದಿದ್ದರೆ ಕೆಟ್ಟದ್ದು ಅನ್ನೋ ಮನಸ್ಥಿತಿ ಸರಿಯಲ್ಲ. ಇದಕ್ಕೆಲ್ಲ ಬಿಜೆಪಿ ಸೊಪ್ಪು ಹಾಕುವುದಿಲ್ಲ ಎಂದಿದ್ದಾರೆ.