Dakshina Kannada : ನಾಮಪತ್ರ ಸಲ್ಲಿಸಿ 70 ಲಕ್ಷ ಆಸ್ತಿ ಘೋಷಿಸಿಕೊಂಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ !!

Dakshina Kannada : ರಾಜ್ಯದಲ್ಲಿ ಭಾರೀ ಸದ್ದುಮಾಡುವ ಲೋಕಸಭಾ ಕ್ಷೇತ್ರಗಳ ಪೈಕಿ ಪ್ರಮುಖವಾಗಿರುವ ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ (Brijesh Chowta) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಚೌಟರು ಒಟ್ಟು 70 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.

ಹೌದು, ಸಾಂಕೇತಿಕವಾಗಿ ನಾಮಪತ್ರ (Nomination)ಸಲ್ಲಿಸಿದ ಬ್ರಿಜೇಶ್ ಚೌಟ ಅವರು ಏಪ್ರಿಲ್ 4ರಂದು ಅಪಾರ ಅಭಿಮಾನಿಗಳು, ನಾಯಕರೊಂದಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ. ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಅವರು ಅಫಿಡವಿಟ್‌ನಲ್ಲಿ 27,31,365 ರೂ. ಮೌಲ್ಯದ ಸ್ಥಿರಾಸ್ತಿ ಮತ್ತು 43,50,000 ಚರಾಸ್ತಿ ಸೇರಿ ಒಟ್ಟು 70,81,365 ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

ಬ್ರಿಜೇಶ್ ಚೌಟ ಆಸ್ತಿ ವಿವರ ಹೀಗಿದೆ

• ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ.

• ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ.

• ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ.

• ಒಟ್ಟು 9,62,010 ರೂ. ಗಳ ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.

• ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ.

• ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.

• ಇನ್ನೋವಾ ಕಾರಿನ ಮಾಲೀಕರಾಗಿರುವ ಇವರು ಈ ಕಾರಿಗಾಗಿ 9,62,010 ರೂ. ಸಾಲ ಮಾಡಿದ್ದಾರೆ. 

• 80 ಸಾವಿರ ರೂ. ನಗದು ಹೊಂದಿರುವ ಇವರು 9 ಲಕ್ಷ ರೂ. ಮೌಲ್ಯದ 137 ಗ್ರಾಂ ಚಿನ್ನವನ್ನು ಹೊಂದಿದ್ದಾರೆ.

ಬ್ರಿಜೇಶ್ ಚೌಟ ಅವರ ರಾಜಕೀಯ ಹಾದಿ: 

• ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದರು.

• ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟ.

• ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌

• 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು.

• 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು.

• ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿರುತ್ತಾರೆ.

Leave A Reply

Your email address will not be published.