Holiday: ರಾಜ್ಯಾದ್ಯಂತ ಮತದಾನ ದಿನದಂದು ಸಾರ್ವತ್ರಿಕ ರಜೆ

Holiday: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಎಪ್ರಿಲ್‌ 26 ಹಾಗೂ 2 ನೇ ಹಂತದ ಮತದಾನ ಮೇ.7 ರಂದು ನಡೆಯಲಿದೆ. ಈ ದಿನ ಏಲ್ಲಾ ರಾಜ್ಯ ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.

ಎಲ್ಲಾ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳು ಸೇರಿ 26.04.2024 ಮತ್ತು ದಿನಾಂಕ 07-05-2024 ರಂದು ನಡೆಯುವ ಚುನಾವಣೆಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ಆಯಾ ಚುನಾವಾಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡಾ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಅನುಕೂಲವಾಗುವಂತೆ ರಜೆ ನೀಡಲಾಗಿದೆ.

Leave A Reply

Your email address will not be published.