K S Eshwarappa: ಈಶ್ವರಪ್ಪಗೆ ಅಮಿತ್ ಶಾ ಕರೆ – ಮೋದಿ ಬೇಡವೆಂದರೂ ನನ್ನ ಸ್ಪರ್ಧೆ ಫಿಕ್ಸ್ ಎಂದ ಈಶ್ವರಪ್ಪ !!

K S Eshwarappa: ಬಿಜೆಪಿ(BJP)ಯಿಂದ ಮಗನಿಗೆ ಹಾವೇರಿ ಲೋಕಸಭಾ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಶಿವಮೊಗ್ಗದಿಂದಲೇ ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ(KS Eshwarappa)ಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.

ಹೌದು, ಬಂಡಾಯ ಅಭ್ಯರ್ಥಿ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪಗೆ ಅಮಿತ್ ಶಾ(Amith Shah) ಕರೆ ಮಾಡಿ ಮಾತನಾಡಿದ್ದಾರೆ. ದೆಹಲಿಗೆ ಬರುವಂತೆಯೂ ಸೂಚಿಸಿದ್ದಾರೆ. ಈ ಬಗ್ಗೆ ಆಪ್ತರ ಜತೆ ಮಾಹಿತಿ ಹಂಚಿಕೊಂಡಿರುವ ಈಶ್ವರಪ್ಪ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ಆದರೆ, ಸ್ಪರ್ಧೆಯ ವಿಚಾರವಾಗಿ ಯಾವುದೇ ಕಾರಣಕ್ಕೂ ನನ್ನ ನಿಲುವು ಬದಲಾಗುವುದಿಲ್ಲ ಎಂದು ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ: Tamilunadu: 2.36 ಲಕ್ಷಕ್ಕೆ ಮಾರಾಟವಾದ ದೇವರ 9 ನಿಂಬೆಹಣ್ಣು !! ಏನಿದರ ಶಕ್ತಿ, ಯಾಕಿಷ್ಟು ಡಿಮ್ಯಾಂಡ್ ?!

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಕೇಂದ್ರ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. ಅವರ ಕೋರಿಕೆಯ ಮೇರೆಗೆ ದೆಹಲಿಗೆ ಹೋಗುತ್ತೇನೆ. ಆದರೆ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದೇನೆ. ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಈಶ್ವರಪ್ಪ ಪುನರುಚ್ಚರಿಸಿದ್ದಾರೆ.

ಇಷ್ಟೇ ಅಲ್ಲದೆ ಪ್ರಧಾನಿ ಮೋದಿ ಹೇಳಿದರೂ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಕೆಎಸ್​ ಈಶ್ವರಪ್ಪ ಹೇಳಿದರು. ನನ್ನ ಸ್ಪರ್ಧೆ ಕುರಿತು ಮೋದಿಗೆ ಮನವರಿಕೆ ಮಾಡುತ್ತೇನೆ. ಪ್ರಧಾನಿ ಮೋದಿ ಕಾಲಿಗೆ ಬಿದ್ದು ಮನವರಿಕೆ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Home Tips: ಕೊಳಕು, ಜಿಗುಟಾದ ಅಡಿಗೆ ಡಬ್ಬಗಳನ್ನು ಈ ರೀತಿ ಸ್ವಚ್ಛ ಮಾಡಿ; ತಕ್ಷಣವೇ ಹೊಳೆಯುತ್ತೆ

Leave A Reply

Your email address will not be published.