CM Siddaramaiah: ಚುನಾವಣಾ ರಾಜಕೀಯಕ್ಕೆ ಸಿಎಂ ಸಿದ್ದರಾಮಯ್ಯ ಗುಡ್ ಬೈ !!

CM Siddaramaiah: ರಾಜ್ಯ ರಾಜಕೀಯದ ಧುರೀಣ, ಕಾಂಗ್ರೆಸ್ ನೇತಾರ ಸಿಎಂ ಸಿದ್ದರಾಮಯ್ಯನವರು(CM Siddaramaiah)ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: DK Shivakumar: ಸುಮಲತಾ ಅವರ ಸುದ್ದಿಗೆ ನಾವು ಹೋಗುವುದಿಲ್ಲ, ಅವರ ಅವಶ್ಯಕತೆಯೂ ನಮಗಿಲ್ಲ : ಡಿಕೆಶಿ

ಹೌದು, ನಾನು ಮುಂದಿನ 2028 ವಿಧಾನಸಭಾ ಚುನಾವಣೆಯ(Vidhanasabha) ಹೊತ್ತಿಗೆ ನನಗೆ 83 ವರ್ಷ ವಯಸ್ಸಾಗುತ್ತೆ. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ತೀರ್ಮಾನ ಮಾಡಿದ್ದು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ತವರು ಕ್ಷೇತ್ರದಲ್ಲಿಯೇ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಅವರು, ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷದ ಬಳಿಕ ವಿಧಾನಸಭಾ ಚುನಾವಣೆ ಎದುರಾಗುತ್ತದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ. ಅವರವರ ದೇಹಸ್ಥಿತಿ, ಆರೋಗ್ಯದ ಬಗ್ಗೆ ಅವರಿಗೇ ಗೊತ್ತಿರುತ್ತದೆ. ನನಗೆ ಮೊದಲಿನಂತೆ ಉತ್ಸಾಹ ಭರಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ನನಗೆ ಯಾವ ಆತಂಕ ಇಲ್ಲ. ಹೀಗಾಗಿ ಕೂಲ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕಾರಣ ನಿವೃತ್ತಿ ಬಳಿಕ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಹಾದಿ ಮತ್ತಷ್ಟು ಸುಗಮಗೊಳ್ಳುವ ನಿರೀಕ್ಷೆ ಇದೆ. ಕಾರಣ ತಂದೆ ಸ್ಪರ್ಧಿಸಿದ ಕ್ಷೇತ್ರದಿಂದ ಸಿದ್ದರಾಮಯ್ಯ ಪುತ್ರ ಕಣಕ್ಕಿಳಿದು ಗೆದ್ದವರು. ಇಲ್ಲಿ ಕುರುಬ ಸಮುದಾಯ ಮತದಾರರು ಹೆಚ್ಚಿದ್ದು, ಇದು ಯತೀಂದ್ರ ಅವರಿಗೆ ವರದಾನವಾಗಲಿದೆ ಎನ್ನಲಾಗಿದೆ.

Leave A Reply

Your email address will not be published.