Sullia: ಸುಳ್ಯ; ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ದೂರು ದಾಖಲು, ಆರೋಪಿ ಪರಾರಿ

Sullia: ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯೊಂದು ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಬಾಡಿಗೆ ಮನೆಯಲ್ಲಿ ವಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲಕ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿದ್ದು, ಈ ವಿಷಯ ಬಾಲಕಿಯ ಪೋಷಕರಿಗೆ ಗೊತ್ತಾದ ಕೂಡಲೇ ಯುವಕ ಪರಾರಿಯಾಗಿರುವ ಘಟನೆ ನಡೆದಿದೆ.

ಇದನ್ನೂ ಓದಿ: ತನಗೆ ಟಿಕೆಟ್ ತಪ್ಪಿಸಿದ್ದು ಯಾರೆಂಬುದರ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ !!

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಯುವಕ ಆಕೆಯ ಮನೆಗೆ ತೆರಳಿದ್ದು, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: Puttur: ಪುತ್ತೂರು: CBI ಕೋರ್ಟ್‌ ದೃಶ್ಯ ಸೃಷ್ಟಿ ಮಾಡಿದ ವಂಚಕರು: ವೈದ್ಯರು ನಂಬಿದ್ದು ಈ ವೀಡಿಯೋ ಕರೆ

Leave A Reply

Your email address will not be published.