Chikkamagaluru: ಮೂಡಿಗೆರೆ: ಗಾಂಜಾ ಮಾರಾಟ ಯತ್ನ; ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Chikkamagaluru: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ನಿರತರಾಗಿದ್ದ ಇಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಉಮ್ಮರ್ ಫಾರೂಕ್‌ ಬಿನ್‌ ಮೊಹಮ್ಮದ್‌ ಫಾರೂಕ್‌, ಅಬ್ದುಲ್‌ ಅಕ್ರಂ ಬಿನ್‌ ಉಮ್ಮರ್‌ ಬೆಳ್ತಂಗಡಿ ಇವರುಗಳು ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: 2nd Puc Result: ಇಂದು ದ್ವಿತೀಯ ಪಿಯುಸಿ ಫಲಿತಾಂಶ – ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರ ಬಳಿ  ಅಕ್ರಮವಾಗಿ ಹೊಂದಿದ್ದ 10,000/ ರೂ ಬೆಲೆಯ ಸುಮಾರು 650 ಗ್ರಾಂ ತೂಕದ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Assault: ಆಘಾತಕಾರಿ ಕೃತ್ಯ; 11 ರ ಬಾಲಕನಿಂದ 4 ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಆರೋಪಿತರ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.