HD kumaraswamy: ಒಕ್ಕಲಿಗ ಭದ್ರಕೋಟೆಯಲ್ಲಿ ಎಚ್‌ ಡಿ ಕುಮಾರಸ್ವಾಮಿ ಗೆಲ್ಲುವರೇ ? : ಮಂಡ್ಯದಲ್ಲಿ ಒಕ್ಕಲಿಗರ ಮತವೇ ನಿರ್ಣಾಯಕ

HD kumaraswamy: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಒಕ್ಕಲಿಗ ಸಮುದಾಯದ ಬೆಂಬಲ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: Price Hike: ಬಿಸಿಲ ತಾಪ ಏರಿಕೆ – ತರಕಾರಿ, ಮಾಂಸದ ಬೆಲೆ ಗಗನಕ್ಕೆ !!

ಜೆಡಿಎಸ್‌ ಮುಖಂಡರ ಪ್ರಕಾರ, ಕುಮಾರಸ್ವಾಮಿ ಅವರು ರಾಜಕೀಯವಾಗಿ ತಟಸ್ಥರಾಗಿರುವ ಸ್ಥಳೀಯ ಒಕ್ಕಲಿಗ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಕೂಡ ಒಕ್ಕಲಿಗರ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಕಣಕ್ಕಿಳಿಸಿರುವುದರಿಂದ ಇದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Vijayapura: ಕೆಲವೇ ಸಮಯದಲ್ಲಿ ಮಗುವಿನ ರಕ್ಷಣಾ ಕಾರ್ಯ ಪೂರ್ಣ; ಬದುಕಿ ಬಾ ಕಂದಾ ಎಂದು ಸರ್ವರ ಪ್ರಾರ್ಥನೆ

ಕುಮಾರಸ್ವಾಮಿ ಅವರನ್ನು ತಿರಸ್ಕರಿಸಲು ಮಂಡ್ಯ ಜನತೆಗೆ ಯಾವುದೇ ಕಾರಣಗಳಿಲ್ಲದಿದ್ದರೂ ಪ್ರಮುಖ ಒಕ್ಕಲಿಗ ಸಮುದಾಯದ ಬೆಂಬಲ ಅವರಿಗೆ ಮುಖ್ಯ. ಒಕ್ಕಲಿಗರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಳೆದ ಹಲವು ತಿಂಗಳಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಅವರು ತಮ್ಮ ವ್ಯವಹಾರದ ಭಾಗವಾಗಿ ಅನೇಕ ಸಿವಿಲ್ ಕೆಲಸಗಳನ್ನು ನಡೆಸಿದ್ದರಿಂದ ಜನರಿಗೆ ಪರಿಚಿತರಾಗಿದ್ದಾರೆ, “ಎಂದು ಹಿರಿಯ ಜೆಡಿಎಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಕುಮಾರಸ್ವಾಮಿಯವರು ಇತ್ತೀಚೆಗೆ ಪ್ರಭಾವಿ ವಕ್ಕಲಿಗ ಮಠವಾದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದು, ಮಠಾಧೀಶರಾದ ನಿರ್ಮಲನಂದ ಸ್ವಾಮೀಜಿ ಅವರ ಜೊತೆ ಚರ್ಚೆ ನಡೆಸಿದ್ದಾರೆ. ಆದಿಚುಂಚನಗಿರಿ ಮಠವು ಈ ಪ್ರದೇಶದಲ್ಲಿ ಒಕ್ಕಲಿಗ ಸಮುದಾಯದ ಮೇಲೆ ಪ್ರಭಾವ ಬೀರುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನಂಬಲಾಗಿದೆ.

ಆದರೆ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿತ್ತು.

ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲ ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗಿಂತ ಜೆಡಿಎಸ್ ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಹಿಂದೆ ಸರಿದಿತ್ತು. ಮಂಡ್ಯ ಮತ್ತು ನಾಗಮಂಗಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಕ್ರಮವಾಗಿ 2,019 ಮತ್ತು 4,414 ಮತಗಳಿಂದ ಸೋತಿದೆ. ಈ ಅಂತರವನ್ನು ನಿವಾರಿಸುವ ಆಶಾವಾದವನ್ನು ಕುಮಾರಸ್ವಾಮಿ ಹೊಂದಿದ್ದಾರೆ.

ಮಂಡ್ಯದಲ್ಲಿ ಕುಮಾರಸ್ವಾಮಿ ಅವರು ಕಾವೇರಿ ವಿಚಾರದ ಮೇಲೆ ಮತದಾರರ ಓಲೈಕೆ ಮಾಡುವ ಮೂಲಕ ಹೆಚ್ಚಿನ ಮತ ಪಡೆಯಬಹುದಾಗಿದೆ. “ಕಾವೇರಿ ಸಮಸ್ಯೆಯನ್ನು ಕಾಂಗ್ರೆಸ್‌ ನಿಭಾಯಿಸಿದ ರೀತಿಗೆ ಮಂಡ್ಯದ ಜನರು ಅಸಮಾಧಾನ ಹೊಂದಿದ್ದಾರೆ ಎಂದು ಸಮೀಕ್ಷೆಗಳು ತಿಳಿಸಿವೆ. ಕುಮಾರಸ್ವಾಮಿ ಅವರು ಆಯೆ,ಯಾದರೆ ಮಂಡ್ಯದ ಜನರೊಂದಿಗೆ ಇದ್ದು ಕಾವೇರಿ ಪರ ನಿಲ್ಲುವುದನ್ನು ಖಚಿತ ಪಡಿಸಿಕೊಳ್ಳಲಿದ್ದಾರೆ ಎಂದು ಮಂಡ್ಯದ ಮಾಜಿ ಶಾಸಕರೊಬ್ಬರು ಹೇಳಿದ್ದಾರೆ.

ಹಾಗೆಯೇ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯವರ 2019ರ ಸೋಲಿನ ಬಗ್ಗೆಯೂ ಸಹಾನುಭೂತಿ ಮೂಡಿಸಬಹುದು.

2019 ರಲ್ಲಿ, ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 7.03 ಲಕ್ಷ ಮತಗಳನ್ನು ಪಡೆದಿದ್ದರೆ, ನಿಖಿಲ್ ಅವರು 5.77 ಲಕ್ಷ ಮತಗಳನ್ನು ಪಡೆದಿದ್ದರು. ಆಗ ಸುಮಲತಾ ಅವರನ್ನು ಬಿಜೆಪಿ ಬೆಂಬಲಿಸಿತ್ತು. ಈ ಬಾರಿ ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿರುವುದರಿಂದ ಬಿಜೆಪಿ ಮತಗಳು ಕೂಡ ಬರಲಿವೆ ಎಂದು ಹೇಳಲಾಗುತ್ತಿದೆ.

ಇತ್ತೀಚಿಗೆ ಕುಮಾರಸ್ವಾಮಿಯವರು ಸುಮಲತಾ ಅವರೊಂದಿಗೆ ಚರ್ಚೆ ನಡೆಸಿ ಮನವೊಲಿಸಿದ ಬಳಿಕ ಸುಮಲತಾ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದರಿಂದ ಜೆಡಿಎಸ್ ಗೆ ಮತ್ತಷ್ಟು ಬಲ ಬಂದಂತಾಗಿದೆ‌.

Leave A Reply

Your email address will not be published.