Lifestyle: ಲೈಂಗಿಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಈ ಆಹಾರಗಳು ಅದ್ಭುತವಾಗಿ ಕೆಲಸ ಮಾಡುತ್ತವೆ : ಅವು ಯಾವುವು ಗೊತ್ತಾ ?

Lifestyle: ಇಂದಿನ ಜಂಜಾಟದ ಬದುಕಿನಲ್ಲಿ ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅದಕ್ಕಿಂತ ಮುಖ್ಯವಾಗಿ ದಾಂಪತ್ಯ ಜೀವನ ಅಸ್ತವ್ಯಸ್ತವಾಗುತ್ತಿದೆ. ಕಡಿಮೆಯಾದ ಲೈಂಗಿಕ ಬಯಕೆ, ದಂಪತಿಗಳ ನಡುವಿನ ಅಂತರವನ್ನು ಹೆಚ್ಚಿಸುತ್ತಿದ್ದು, ಅಂತಿಮವಾಗಿ ವಿಚ್ಛೇದನಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಜನರಲ್ಲಿ ಲೈಂಗಿಕ ಆರೋಗ್ಯದ ಬಗ್ಗೆ ಅನೇಕ ಸಮಸ್ಯೆಗಳು ಕಾಡುತ್ತಿವೆ. ಆದರೆ ಇವೆಲ್ಲವನ್ನೂ ನಿವಾರಿಸಿಕೊಳ್ಳಲು ನಮ್ಮ ಆಹಾರ ಪದ್ದತಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅಗತ್ಯ. ಕೆಲವು ಆಹಾರಗಳನ್ನು ತಿನ್ನುವುದರಿಂದ ಲೈಂಗಿಕ ಶಕ್ತಿಯನ್ನು ದ್ವಿಗುಣಗೊಳಿಸುತ್ತದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಸಾಮಾನ್ಯವಾಗಿ ನಾವು ಸೇವಿಸುವ ಆಹಾರವು ನಮ್ಮ ಲೈಂಗಿಕ ಕಾರ್ಯಕ್ಷಮತೆಯ ಹೆಚ್ಚಳದ ಮೇಲೆ ಪರಿಣಾಮ ಬೀರುತ್ತದೆ. ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತವೆ.

ಇದನ್ನೂ ಓದಿ: Adhar Card: ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್! ಹೊಸ ಪೋರ್ಟಲ್ ಸ್ಟಾರ್ಟ್

ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುವ ಫಲಾಹಾರಗಳಿವು :

1. ದಾಳಿಂಬೆ : ದಾಳಿಂಬೆ ಹಣ್ಣುಅನೇಕ ಆರೋಗ್ಯ ಸಮಸ್ಯೆಗಳಿಂದ ರಕ್ಷಣೆ ನೀಡುವ ಅತ್ಯದ್ಭುತ ಫಲಹಾರವಾಗಿದೆ. ಈ ಹಣ್ಣಿನಲ್ಲಿ ಲೈಂಗಿಕ ವರ್ಧಕ ಗುಣಗಳಿಂದ ಸಮೃದ್ಧವಾಗಿರುತ್ತವೆ.

ಇದನ್ನೂ ಓದಿ: Iran-Israel: ಮಧ್ಯಪ್ರಾಚ್ಯ ಉದ್ವಿಗ್ನ : ಇರಾನ್‌, ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಇಲಾಖೆಯಿಂದ ಸೂಚನೆ

2. ಬೀನ್ಸ್ : ಬೀನ್ಸ್, ವಿಶೇಷವಾಗಿ ಕಪ್ಪು ಬೀನ್ಸ್, ವಿಟಮಿನ್ಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ಫಲವತ್ತತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಬೀನ್ಸ್ ವಿಶೇಷವಾಗಿ ಹೆಚ್ಚು ಕಬ್ಬಿಣಾಂಶ ಸಮೃದ್ಧವಾಗಿರುತ್ತದೆ.

3. ಆವಕಾಡೊ: ಆವಕಾಡೊವನ್ನು ಕಾಮೋತ್ತೇಜಕ ಹಣ್ಣು ಎಂದೂ ಕರೆಯುತ್ತಾರೆ. ಮೊಟ್ಟೆಯ ಆಕಾರದ ಹಣ್ಣಿನಲ್ಲಿ ಬೀಟಾ-ಕ್ಯಾರೋಟಿನ್, ವಿಟಮಿನ್ ಇ ಮತ್ತು ಮೆಗ್ನೀಶಿಯಮ್ ಮುಂತಾದ ಪೋಷಕಾಂಶಗಳಿವೆ. ಇವು ಲೈಂಗಿಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿವೆ.

4. ಸ್ಟ್ರಾಬೆರಿ : ಪ್ರಾಚೀನ ಕಾಲದಿಂದಲೂ ಕಾಮೋತ್ತೇಜಕ ಆಹಾರಗಳಲ್ಲಿ ಸ್ಟ್ರಾಬೆರಿಗಳಿಗೆ ವಿಶೇಷ ಸ್ಥಾನವಿದೆ. ಇದನ್ನು ಶುಕ್ರ ದೇವತೆಯ ಸಂಕೇತವೆಂದು ಕರೆಯಲಾಗುತ್ತದೆ. ಸಂತೋಷದ ದಾಂಪತ್ಯ ಜೀವನವನ್ನು ಹೊಂದಲು ನವವಿವಾಹಿತರಿಗೆ ಈ ಹಣ್ಣುಗಳನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಆದರೆ, ಈ ಹಣ್ಣುಗಳಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್, ಮೆಗ್ನಿಸಿಯಮ್ ಮತ್ತು ಸತುವು ಫಲವತ್ತತೆಯನ್ನು ಸುಧಾರಿಸುತ್ತದೆ. ಈ ಅಂಶಗಳು ವ್ಯಕ್ತಿಗಳಲ್ಲಿ ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ.

5. ಅಂಜೂರ: ಅಂಜೂರವನ್ನು ಪುರುಷರ ನಿಮಿರುವಿಕೆ ಸಮಸ್ಯೆಗೆ ರಾಮಬಾಣ ಎಂದು ಕರೆಯಲಾಗುತ್ತದೆ. ಇದು ಅನೇಕ ಅಧ್ಯಯನಗಳಲ್ಲಿ ಸಾಬೀತಾಗಿದೆ. ಅಂಜೂರವು ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ, ಇದು ಸಂತಾನೋತ್ಪತ್ತಿ ಆರೋಗ್ಯ ಮತ್ತು ಫಲವತ್ತತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Leave A Reply

Your email address will not be published.