2nd Phase Election In Karnataka: ಲೋಕಸಭಾ ಚುನಾವಣೆ: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಇಂದಿನಿಂದ ರಿಂದ ನಾಮಪತ್ರ ಸಲ್ಲಿಕೆ ಶುರು

2nd Phase Election In Karnataka: ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣಾ ಅಖಾಡದಲ್ಲಿ ಪ್ರಚಾರ ಜೋರಾಗಿರುವ ಬೆನ್ನಲ್ಲೇ ಉತ್ತರ ಕರ್ನಾಟಕ ಭಾಗದ ಉಳಿದ 14 ಕ್ಷೇತ್ರಗಳಲ್ಲೂ ಶುಕ್ರವಾರದಿಂದ ಚುನಾವಣಾ ಅಬ್ಬರ ಶುರುವಾಗಲಿದೆ.

ಇದನ್ನೂ ಓದಿ: Crime News: ತನ್ನ ಇಬ್ಬರು ಮಕ್ಕಳ ಕೊಂದ ತಾಯಿ; ಇದೀಗ ಪಶ್ಚಾತ್ತಾಪ

ಮೊದಲ ದಿನವೇ ಕಲಬುರಗಿ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಧಾಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಈ.ತುಕಾರಾಂ ಅವರೂ ಶುಕ್ರವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಹಾಗೂ ಬಸವರಾಜ ಬೊಮ್ಮಾಯಿ ಹಾವೇರಿ ಕ್ಷೇತ್ರದಲ್ಲಿ, ಕೇಂದ್ರ ಸಚಿವ ಪ್ರಲಾದ ಜೋಶಿ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿದ್ದು, ಇವರು ಸೇರಿದಂತೆ ಹಲವು ಪ್ರಮುಖರು 2ನೇ ಹಂತದ ಈ ಚುನಾವಣೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: Telecom: ಚುನಾವಣೆ ನಂತರ ಮೊಬೈಲ್ ಸೇವಾ ಶುಲ್ಕ ಏರಿಕೆ ಸಂಭವ

2ನೇ ಹಂತದ ಚುನಾವಣೆ ಕ್ಷೇತ್ರಗಳು: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ

ಚುನಾವಣಾ ವೇಳಾಪಟ್ಟಿ: ಏ.12 ಅಧಿಸೂಚನೆ, ಏ.19 ನಾಮಪತ್ರ ಸಲ್ಲಿಸಲು ಕೊನೆ ದಿನ, ಏ.20 ನಾಮಪತ್ರಗಳ ಪರಿಶೀಲನೆ, ಏ.22ನಾಮಪತ್ರ ಹಿಂಪಡೆಯಲು ಕೊನೆ ದಿನ. ಮೇ 7 ಮತದಾನ, ಜೂ.4 ಮತ ಎಣಿಕೆ.

ಸುರಪುರ ಉಪ ಚುನಾವಣೆ: ಸುರಪುರ ಎಸ್‌ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಗೂ ಶುಕ್ರವಾರ (ಏ.12) ಅಧಿಸೂಚನೆ ಹೊರಬೀಳಲಿದೆ. ರಾಜ್ಯದಲ್ಲಿನ ಸಾರ್ವತ್ರಿಕ ಚುನಾವಣೆ 2ನೇ ಹಂತದ ವೇಳಾಪಟ್ಟಿಯೇ ಈ ಉಪಚುನಾವಣೆಗೆ ಅನ್ವಯವಾಗಲಿದೆ.

Leave A Reply

Your email address will not be published.