Bengaluru: ಇಬ್ಬರು ಮಕ್ಕಳನ್ನು ಕೊಂದ ತಾಯಿ ಪರಪ್ಪನ ಅಗ್ರಹಾರದಲ್ಲಿ ಆತ್ಮಹತ್ಯೆ !!

Bengaluru: ಸಾಕಲು ಕಷ್ಟವಾಗುತ್ತಿದೆ ಎಂದು ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ (Parappana Agrahara) ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ (Jail) ಆತ್ಮಹತ್ಯೆಗೆ (Suicide) ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: Mangaluru: ಮಂಗಳೂರಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ – ಇಲ್ಲಿದೆ ಕಾರ್ಯಕ್ರಮದ ವಿವರ !!

ಹೌದು, ಆರೋಪಿ ಗಂಗಾದೇವಿ ಮಂಗಳವಾರ ರಾತ್ರಿ ಬೆಂಗಳೂರಿನ(Bengaluru) ಜಾಲಹಳ್ಳಿ (Jalahalli) ಗ್ರಾಮದಲ್ಲಿ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿದ್ದಳು. ಈ ತಾಯಿಯನ್ನು ಪರಪ್ಪನ ಅಗ್ರಹಾರಕ್ಕೆ ಅಟ್ಟಲಾಗಿತ್ತು. ಜೈಲಿಗೆ ಹೋದ ದಿನವೇ ಶೌಚಾಲಯದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಇದನ್ನೂ ಓದಿ: Shrinvas Prasad: ಮೋದಿ ಆಗಮನದ ಬೆನ್ನಲ್ಲೇ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸಂಸದ ಶ್ರೀನಿವಾಸ್ ಪ್ರಸಾದ್!!

ಇಂದು ಮರಣೋತ್ತರ ಪರೀಕ್ಷೆ ಮಾಡಿ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಈ ಕುರಿತು ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗಂಗಾದೇವಿ ಮಕ್ಕಳನ್ನು ಕೊಲ್ಲಲು ಕಾರಣ?

ಮಕ್ಕಳಿಬ್ಬರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಗಂಗಾದೇವಿ ಕಂಟ್ರೊಲ್ ರೂಂಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು. ಗಂಗಾದೇವಿಗೆ ಹತ್ತು ವರ್ಷಗಳ ಹಿಂದೆ ಮದುವೆಯಾಗಿತ್ತು. ಆಕೆಯ ಪತಿ ಪತಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಆತನ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿತ್ತು. ʼʼಕೇಸ್ ಸಂಬಂಧ ಕೌನ್ಸಿಲಿಂಗ್ ನಡೆಸಿ ಆತನನ್ನು ಬಂಧಿಸಲಾಗಿತ್ತು. ಹೀಗಾಗಿ ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಗಂಗಾದೇವಿ ಈ ಕೃತ್ಯ ಎಸಗಿದ್ದಾಳೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಅಲ್ಲದೆ ಗಂಗಾದೇವಿ ಕೂಡ ‘ನಾನು ವೈವಾಹಿಕ ಜೀವನದಲ್ಲಿ ಪತಿಯಿಂದ ಸಾಕಷ್ಟು ನೋವು ಅನುಭವಿಸಿದ್ದೇನೆ. ಈ ದುಸ್ಥಿತಿ ಮಕ್ಕಳಿಗೆ ಬರಬಾರದೆಂಬ ಕಾರಣಕ್ಕೆ ಅವರನ್ನು ಕೊಲೆ ಮಾಡಿದೆ,” ಎಂದು ತಪ್ಪೊಪ್ಪಿಕೊಂಡಿದ್ದಳು.

Leave A Reply

Your email address will not be published.