2nd PUC Exam: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ; ಎ.18 ರವರೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

2nd PUC Exam: 2024 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ. ಎ.16 ದಿನಾಂಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಆದರೆ ಇದೀಗ ಕೊನೆಯ ದಿನಾಂಕವನ್ನು ಎ.18 ರ ಸಂಜೆ 5 ಗಂಟೆಯವರೆಗೆ ವಿಸ್ತರಣೆ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಆದೇಶ ಹೊರಡಿಸಿದೆ.

2024 ರ ದ್ವಿತೀಯ ಪರೀಕ್ಷೆ-1 ಕ್ಕೆ ಹಾಜರಾತಿ ಕಡಿಮೆ ಇದ್ದ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಹಾಗೂ 31-03-2024 ಕ್ಕೆ 17 ವರ್ಷ ತುಂಬಿದ ಕಲಾ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಯಾಗಿ ಕಾಲೇಜಿನಲ್ಲಿ ನೊಂದಾಯಿಸಲು ಎ.18 ಕೊನೆಯ ದಿನಾಂಕವಾಗಿ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Hassan: ಮನೆಯಂಗಳದಲ್ಲೇ ಎರಡು ಆನೆಗಳ ಕಾದಾಟ; ವೀಡಿಯೋ ವೈರಲ್‌

Leave A Reply

Your email address will not be published.