Rahul Gandhi: ರಾಹುಲ್ ಗಾಂಧಿಗೆ 10 ಪ್ರಶ್ನೆ ಕೇಳಿದ ಬಿಜೆಪಿ !!

Rahul Gandhi: ಇಂದು ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಕಾಂಗ್ರೆಸ್ ಯುವ ನೇತಾರ ರಾಹುಲ್ ಗಾಂಧಿ ಅವರು ಆಗಮಿಸಿದ್ದಾರೆ. ಮಂಡ್ಯ ಮೂಲಕ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿಯು ರಾಹುಲ್ ಗಾಂಧಿ(Rahul Gandhi) ಅವರಿಗೆ 10 ಪ್ರಶ್ನೆ ಕೇಳಿ ಉತ್ತರಿಸುವಂತೆ ದುಂಬಾಲು ಬಿದ್ದಿದೆ.

 

ಹೌದು, ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೆ ಬಿಜೆಪಿ (BJP Karnataka) ಹತ್ತು ಪ್ರಶ್ನೆಗಳನ್ನು ಕೇಳಿದೆ. ಇದಕ್ಕೆ ಉತ್ತರ ಕೊಡಿ ಎಂದು ಆಗ್ರಹಿಸಿದೆ. ಇತ್ತೀಚೆಗೆ ಕೆಲ ದಿನಗಳ ಹಿಂದೆ ಮೋದಿಯವರು ರಾಜ್ಯಕ್ಕೆ ಬರುವಾಗ ಕಾಂಗ್ರೆಸ್ ಕೂಡ ಹಲವು ಪ್ರಶ್ನೆಗಳನ್ನು ಅವರ ಮುಂದಿಟ್ಟಿತ್ತು.

ರಾಹುಲ್ ಗಾಂಧಿಗೆ ಬಿಜೆಪಿ ಕೇಳಿದ 10 ಪ್ರಶ್ನೆಗಳು:

1. ಸರ್ಕಾರ ರಚನೆಯಾಗಿ 11 ತಿಂಗಳು ಕಳೆದರು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಚಾಲನೆಗೆ ಬಂದಿಲ್ಲ ಉತ್ತರ ಕೊಡಿ
2. ಆರ್ಥಿಕವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ – ಉತ್ತರ ಕೊಡಿ
3 ವರ್ಗಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ನೀವ್ಯಾಕೆ ಸುಮ್ಮನಿದ್ದೀರಾ ?
4 ರಾಜ್ಯದಲ್ಲಿ 692 ರೈತರು (ಅನ್ನದಾತರು) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಸರ್ಕಾರವನ್ನು ತರಾಟೆ ತೆಗೆದುಕೊಳ್ಳುತ್ತೀರಾ?
5 ರಾಜ್ಯದ ರೈತರಿಗೆ ದ್ರೋಹ ಬಗೆದು ತಮಿಳುನಾಡಿಗೆ ನೀರು ಬಿಟ್ಟಿದ್ದು ಖಂಡಿಸುತ್ತೀರಾ?
6 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಇದಕ್ಕೆ ಹೊಣೆ ಹೊರುತ್ತೀರಾ?
7 ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ ಮಹಿಳೆಯರ ರಕ್ಷಣೆಗೆ ಯಾರು ಹೊಣೆ?
ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ್ದು ಖಂಡಿಸುವಿರಾ?
8 ಗುತ್ತಿಗೆದಾರ ಕೆಂಪಣ್ಣ ಸರ್ಕಾರ 60% ಕಮಿಷನ್ ಆರೋಪ ಮಾಡುತ್ತಿದ್ದಾರೆ. ತಪಿತಸ್ಥ ಸಚಿವರ ಮೇಲೆ ಕ್ರಮ ಜರುಗಿಸಲಾಗುವುದಾ?
9 ಬರ ಪರಿಹಾರಕ್ಕೆ ರಾಜ್ಯದಿಂದ ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ಸೂಚಿಸುವಿರಾ?
10 ಆಡಳಿತ ಪಕ್ಷದ ಶಾಸಕರೇ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ದೂರು ನೀಡುತ್ತಿದ್ದಾರೆ. ಇದರ ವಿರುದ್ಧ ಕ್ರಮ ಜರುಗಿಸುವಿರಾ?
11 ಬ್ರಾಂಡ್ ಬೆಂಗಳೂರು ಕೊಡುವಿರಾ? ಈಗ ಬಾಂಬ್ ಬೆಂಗಳೂರು ಮಾಡಲಾಗಿದೆ. ಇದಕ್ಕೆ ಪರಿಹಾರ ಏನು?

Leave A Reply

Your email address will not be published.