CET Guideline : ‘ಸಿಇಟಿ’ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ !!
CET Guideline: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ರಾಜ್ಯಾದ್ಯಂತ ನಾಳೆ ಹಾಗೂ ನಾಡಿದ್ದು ಅಂದರೆ ಏಪ್ರಿಲ್ 18, 19 ರಂದು ಸಿಇಟಿ(CXT) ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ವಿದ್ಯಾರ್ಥಿಗಳಿಗೆ ಮಾರ್ಗಸೂಚಿ(Guideline):
• ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ.
• ನೀಲಿ ಅಥವಾ ಕಪ್ಪು ಬಣ್ಣದ ಪೆನ್ ಮಾತ್ರ ಬಳಸತಕ್ಕದ್ದು
• ತುಂಬು ತೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ.
• ಮೊಬೈಲ್, ಬ್ಲೂಟೂತ್, ಟ್ಯಾಬ್ಲೆಟ್, ಕೈಗಡಿಯಾರ, ಕ್ಯಾಲುಕುಲೇಟರ್, ನೋಟ್ ಪ್ಯಾಡ್, ಐ-ಪಾಡ್, ಇಯರ್ ಫೋನ್ ಇತ್ಯಾದಿಗಳನ್ನು ತರುವಂತಿಲ್ಲ.
• ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ.
• ಓಎಂಆರ್ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್ ಕೋಡ್ ನಮೂದಿಸುವುದು ಕಡ್ಡಾಯ.
• ಓಎಂಆರ್ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು.
• ಓಎಂಆರ್ ಶೀಟ್‌ನಲ್ಲಿರುವ ಟೈಮಿಂಗ್ ಮಾರ್ಕ್ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ.
ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು,ಇದಕ್ಕೆ ವ್ಯಾಪಕ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.