CET: ರಾಜ್ಯಾದ್ಯಂತ ನಾಳೆ, ನಾಡಿದ್ದು ಸಿಇಟಿ

CET: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ 2024ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರಾಜ್ಯಾದ್ಯಂತ ಏ.18-19ರಂದು ನಡೆಯಲಿದೆ. ರಾಜ್ಯದ 700ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: Karwara: ಶಾಸಕ ವಸಂತ್ ಅಸ್ನೋಟಿಕರ್ ಶೂಟೌಟ್ ಪ್ರಕರಣ: ಆರೋಪಿ ರಾಜನ್ ಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ಸಿಇಟಿಗೆ 3,27,384 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಈ ವರ್ಷ ಅತಿ ಹೆಚ್ಚಿನ ಅಭ್ಯರ್ಥಿಗಳು ಸಿಇಟಿಗೆ ನೋಂದಾಯಿಸಿಕೊಂಡಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.

ಇದನ್ನೂ ಓದಿ: BJP ಸದಸ್ಯತ್ವಕ್ಕೆ ಸಂಸದ ಕರಡಿ ಸಂಗಣ್ಣ ರಾಜೀನಾಮೆ!!

ಪರೀಕ್ಷೆ ಬೆಳಗ್ಗೆ 10.30ಕ್ಕೆ ಆರಂಭವಾಗಲಿದ್ದು, ವಿರಾಮ ಸಮಯ ಸೇರಿ 3.50ರವರೆಗೆ ಪರೀಕ್ಷೆ ನಡೆಯಲಿದೆ. ಏ.18 ರಂದು ಜೀವಶಾಸ್ತ್ರ-ಗಣಿತಶಾಸ್ತ್ರ ಮತ್ತು ಏ.19ರಂದು ಭೌತಶಾಸ್ತ್ರ- ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.

Leave A Reply

Your email address will not be published.