Karnataka Rain: ಗುಡುಗು ಸಹಿತ ಭಾರೀ ಮಳೆಯ ಸಂಭವ; 40ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Share the Article

Karnataka Rain: ರಾಜ್ಯಾದ್ಯಂತ ಹಗುರವಾದ ಸಾಧಾರಣ ಮಳೆಯಾಗುವ ಸಂಭವವಿದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವನೀಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Gicchi Giligili: ‘ಗಿಚ್ಚಿಗಿಲಿಗಿಲಿʼ ವೇದಿಕೆಯಲ್ಲಿ ಮತ್ತೆ ಕಾಣಿಸಿಕೊಂಡ ʼಡ್ರೋನ್‌ʼ

ದಾವಣಗೆರೆ ಜಿಲ್ಲೆಯಲ್ಲಿ ಸೇರಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಕೂಡಾ ಮಳೆಯಾಗುವ ಸಂಭವವಿದೆ. ಹಾಗೂ ಉಳಿದ ಕಡೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಇದನ್ನೂ ಓದಿ: Crime News: ತಡರಾತ್ರಿ ಬೆಚ್ಚಿಬೀಳೀಸುವ ಘಟನೆ; ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಬರ್ಬರ ಹತ್ಯೆ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಇಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರಲಿದೆ.

ಮುಂದಿನ 48 ಗಂಟೆಯಲ್ಲಿ ಮೋಡ ಕವಿದ ವಾತಾವರಣವಿದೆ.

Leave A Reply

Your email address will not be published.