Mysore: ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಬಟ್ಟೆ ಹರಿದು ಹಲ್ಲೆ

Share the Article

Mysore: ಪ್ರಧಾನಿ ನರೇಂದ್ರ ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನೋರ್ವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಆರೋಪವೊಂದು ಕೇಳಿ ಬಂದಿದೆ. ರೋಹಿತ್‌ ಎಂಬಾತನ ಮೇಲೆ ಇವರು ಹಲ್ಲೆ ಮಾಡಿದ್ದಾರೆ.

ಈ ಕುರಿತು ರೋಹಿತ್‌ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗಲು ಒತ್ತಾಯ ಮಾಡಿದ್ದಾರೆ ಎಂದು ಹೇಳಿದ್ದು, ನರೇಂದ್ರ ಮೋದಿ ಹಾಡು ಮಾಡಿದ್ದೀಯ ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿರುವ ಕುರಿತು ರೋಹಿತ್‌ ಆರೋಪ ಮಾಡಿದ್ದಾರೆ.

ದುಷ್ಕರ್ಮಿಗಳು ಬೆದರಿಕೆ ಜೊತೆಗೆ ಆತನಿಗೆ ಹಲ್ಲೆ ಮಾಡಿ, ಬಟ್ಟೆ ಹರಿದು ಹಾಕಿದ್ದಾರೆ. ಹಲ್ಲೆಗೊಳಗಾದ ಯುವಕ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಂತರ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ನೀಡಿದ್ದಾರೆ. ಈ ಘಟನೆ ಕುರಿತು ರೋಹಿತ್‌ ಅವರು ವೀಡಿಯೋ ಮೂಲಕ ಮಾಹಿತಿ ನೀಡಿರುವುದಾಗಿ ಟಿವಿ9 ವರದಿ ಮಾಡಿದೆ.

ಇದನ್ನೂ ಓದಿ: ಇನ್ಮುಂದೆ ಬ್ಯಾಂಕ್ ಅಲ್ಲಿ ಲೋನ್ ಪಡೆಯಬೇಕಂದ್ರೆ ಕಡ್ಡಾಯವಾಗಿ ಈ ದಾಖಲೆ ಸಲ್ಲಿಸಬೇಕು; RBI ಖಡಕ್ ಆದೇಶ; ಈ ದಿನದಿಂದಲೇ ಜಾರಿ

Leave A Reply